ETV Bharat / state

ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು: ಸಚಿವ ವಿ.ಸೋಮಣ್ಣ

author img

By

Published : Jun 12, 2021, 12:18 PM IST

Updated : Jun 12, 2021, 1:06 PM IST

ಪ್ರತಿಯೊಬ್ಬರಿಗೂ ಒಂದೊಂದು ಕಾಯಿಲೆ ಇರುತ್ತದೆ. ಕೆಲವರಿಗೆ ದೆಹಲಿಗೆ ಹೋಗುವ ಕಾಯಿಲೆ, ಮತ್ತೆ ಕೆಲವರಿಗೆ ಕೆಲಸ ಮಾಡುವ ಕಾಯಿಲೆ. ನನಗೆ ಕೊರೊನಾದಂತಹ ಈ ಸಂದರ್ಭದಲ್ಲಿ ಕೆಲಸ ಮಾಡುವ ಕಾಯಿಲೆ ಇದ್ದು, ನಾವೆಲ್ಲಾ ಕೊರೊನಾ ನಿಯಂತ್ರಣ ಮಾಡಬೇಕು. ಇಂತಹ ಸಂದರ್ಭಗಳಲ್ಲಿ ಈ ರೀತಿಯ ಬೆಳವಣಿಗೆ ಸರಿಯಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

Statement of Minister V. Somanna in Mysore
ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ

ಮೈಸೂರು: ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದು, ದೆಹಲಿಗೆ ಹೋಗುವುದು ಇದಕ್ಕೆಲ್ಲಾ ಹೈಕಮಾಂಡ್ ಕಡಿವಾಣ ಹಾಕಬೇಕಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ

ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಸೋಮಣ್ಣ, ರಾಜ್ಯದಲ್ಲಿ ಯಾರೂ ನಾಯಕತ್ವ ಬದಲಾವಣೆ ಬಗ್ಗೆ ದೆಹಲಿಗೆ ಹೋಗಿಲ್ಲ. ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ನನ್ನ ಬುದ್ಧಿವಂತಿಕೆಯನ್ನು ಕೊರೊನಾ ನಿಯಂತ್ರಣಕ್ಕೆ ಬಳಸಿಕೊಳ್ಳುತ್ತಿದ್ದೇನೆ. ಕೆಲವರು ಅವರ ಬುದ್ಧಿವಂತಿಕೆಯನ್ನು ಬೇರೆ ವಿಚಾರಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಯಾವ ಕಾರಣಕ್ಕೆ ದೆಹಲಿಗೆ ಹೋಗಿದ್ದೀರಿ ಎಂಬುದನ್ನು ಅವರ ಬಳಿಯೇ ಕೇಳಿ ಎಂದು ಪರೋಕ್ಷವಾಗಿ ಸಚಿವ ಸಿ.ಪಿ.ಯೋಗೆಶ್ವರ್​​​ಗೆ ಟಾಂಗ್ ನೀಡಿದರು.

ಪ್ರತಿವೊಬ್ಬರಿಗೂ ಒಂದೊಂದು ಕಾಯಿಲೆ ಇರುತ್ತದೆ. ಕೆಲವರಿಗೆ ದೆಹಲಿಗೆ ಹೋಗುವ ಕಾಯಿಲೆ, ಮತ್ತೆ ಕೆಲವರಿಗೆ ಕೆಲಸ ಮಾಡುವ ಕಾಯಿಲೆ. ನನಗೆ ಕೊರೊನಾದಂತಹ ಈ ಸಂದರ್ಭದಲ್ಲಿ ಕೆಲಸ ಮಾಡುವ ಕಾಯಿಲೆ ಇದ್ದು, ನಾವೆಲ್ಲಾ ಕೊರೊನಾ ನಿಯಂತ್ರಣ ಮಾಡಬೇಕು. ಇಂತಹ ಸಂದರ್ಭಗಳಲ್ಲಿ ಈ ರೀತಿಯ ಬೆಳವಣಿಗೆ ಸರಿಯಲ್ಲ ಎಂದರು.

Last Updated : Jun 12, 2021, 1:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.