ETV Bharat / state

ಆರಗ ಜ್ಞಾನೇಂದ್ರ ವಿರುದ್ಧ ರಾಜ್ಯಾದ್ಯಂತ ಕಪ್ಪು ಮಸಿ ಚಳವಳಿ: ಡಾ.ಬಿ.ಜೆ.ವಿಜಯ್‌ ಕುಮಾರ್

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣದ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

author img

By

Published : Aug 8, 2023, 7:16 PM IST

Dr. B J Vijay Kumar in Pressmeet
ಸುದ್ದಿಗೋಷ್ಠೀಯಲ್ಲಿ ಡಾ.ಬಿ.ಜೆ.ವಿಜಯ್‌ಕುಮಾರ್
ಮೈಸೂರು ಕಾಂಗ್ರೆಸ್‌ ಮುಖಂಡ ಡಾ. ಬಿ. ಜೆ. ವಿಜಯ್‌ ಕುಮಾರ್ ಹೇಳಿಕೆ

ಮೈಸೂರು: ಮಾಜಿ ಸಚಿವ ಆರಗ ಜ್ಞಾನೇಂದ್ರ ಎಲ್ಲೇ ಹೋದರೂ ಅವರ ವಿರುದ್ಧ ಕಪ್ಪು ಮಸಿ ಬಳಿಯುವ ಚಳವಳಿಯನ್ನು ರಾಜ್ಯಾದ್ಯಂತ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, ಹಿರಿಯ ರಾಜಕೀಯ ಮುತ್ಸದ್ಧಿ, ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಗುರವಾಗಿ ಮಾತನಾಡಿದ್ದಾರೆ. ಆರಗ ಜ್ಞಾನೇಂದ್ರ ಕಂಡಲ್ಲಿ ರಾಜ್ಯದ ಉದ್ದಗಲಕ್ಕೂ ಕಪ್ಪು ಮಸಿ ಬಳಿಯುವ ಚಳವಳಿಗೆ ಮೈಸೂರಿನಿಂದಲೇ ವಿದ್ಯುಕ್ತ ಚಾಲನೆ ನೀಡಲಿದ್ದೇವೆ ಎಂದರು.

ವಿವಿಧತೆಯಲ್ಲಿ ಏಕತೆ ಇರುವ ಪ್ರಪಂಚದ ಶಕ್ತಿಶಾಲಿ ಪ್ರಜಾತಂತ್ರ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದು. ಬ್ರಿಟಿಷ್ ಸಾಮ್ರಾಜ್ಯದ ಆಡಳಿತಶಾಹಿ ವರ್ಗ, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಕಪ್ಪುವರ್ಣೀಯರನ್ನು ವಿರೋಧಿಸಿದ್ದು ಹಾಗೂ ದ್ವೇಷಿಸಿದ್ದು ಜಗತ್ತಿಗೆ ಗೊತ್ತೇ ಇದೆ. ಅದೇ ಮನಸ್ಥಿತಿಯ ವಂಶವಾಹಿನಿಗಳು ಇನ್ನೂ ಭಾರತದಲ್ಲಿ ಜೀವಂತವಾಗಿವೆ ಎಂಬುದಕ್ಕೆ ಆರಗ ಜ್ಞಾನೇಂದ್ರ ಅವರೇ ಸಾಕ್ಷಿ ಎಂದು ಕಿಡಿಕಾರಿದರು.

ಮತೀಯವಾದ ಹಾಗೂ ವರ್ಣಭೇದ ನೀತಿಯನ್ನು ಆರಾಧಿಸುವ ಹಾಗೂ ಹಾಗೂ ಪೋಷಿಸುವ ರಾಜಕೀಯ ಪಕ್ಷಗಳ, ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಯನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಬಿಜೆಪಿಯ ಅಂತರ್ಯದಲ್ಲಿರುವ ಇಂಥ ಹೇಳಿಕೆಗಳೇ ವೈಜ್ಞಾನಿಕವಾದ ಸತ್ಯ. ಆರಗ ಜ್ಞಾನೇಂದ್ರ ಅವರು ತಮ್ಮ ಹೇಳಿಕೆಗಳ ಮೂಲಕ, ಉತ್ತರ ಕರ್ನಾಟಕ ಜನರಿಗೆ ಅವಮಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಉನ್ನತ ಸ್ಥಾನದಲ್ಲಿದ್ದು, ಯಾವ ರೀತಿ ಮಾತನಾಡಬೇಕು ಎನ್ನುವುದು ಕಲಿಯಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರಗ ಜ್ಞಾನೇಂದ್ರ ಹೇಳಿದ್ದೇನು? : ಇತ್ತೀಚೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಸ್ತೂರಿ ರಂಗನ್​ ವರದಿ ಅನುಷ್ಠಾನ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಆರಗ ಜ್ಞಾನೇಂದ್ರ, "ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಿನಂತಿರುತ್ತಾರೆ. ಖರ್ಗೆಯವರನ್ನು ನೋಡಿದರೆ ಇದು ತಿಳಿಯುತ್ತದೆ. ಅರಣ್ಯ ಮಂತ್ರಿಗಳಾದ ಈಶ್ವರ ಖಂಡ್ರೆಯವರ ತೆಲೆ ಮೇಲೆ ಕೂದಲು ಮುಚ್ಚಿಕೊಂಡಿರುವುದರಿಂದ ಕರಕಲಾಗದಂತೆ ಉಳಿದುಕೊಂಡಿದ್ದಾರೆ" ಎಂದು ಹೇಳಿಕೆ ನೀಡಿದ್ದರು.

ಆರಗ ಜ್ಞಾನೇಂದ್ರ ಹೇಳಿಕೆಯ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿ, ಪಕ್ಷದಿಂದ ಉಚ್ಛಾಟನೆ ಮಾಡುವಂತೆಯೂ ಒತ್ತಾಯಿಸಿದ್ದರು. ಬಳಿಕ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಕ್ಷಮೆ ಯಾಚಿಸಿದ್ದರು.

ಇದನ್ನೂ ಓದಿ: ಖರ್ಗೆ ಖಂಡ್ರೆ ವಿರುದ್ಧ ವರ್ಣಭೇದ ನಿಂದನೆ.. ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದ ವೀರಶೈವ ಮಹಾಸಭಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.