ETV Bharat / state

ಕಾಡಾನೆ ಹಾವಳಿ ತಡೆಗೆ ಸ್ಟೀಲ್​ ವೈಯರ್​ ರೋಪ್​ ಬ್ಯಾರಿಕೇಡ್​: ರಾಜ್ಯದಲ್ಲೇ ಮೊದಲ ಪ್ರಯತ್ನ

author img

By

Published : Jun 22, 2022, 5:32 PM IST

Updated : Jun 22, 2022, 6:56 PM IST

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳು ಗ್ರಾಮಗಳಿಗೆ ನುಗ್ಗದಂತೆ ತಡೆಯಲು ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಸಲಾಗಿದ್ದು, ರಾಜ್ಯದಲ್ಲಿ ಈ ಪ್ರಯತ್ನ ಇದೇ ಮೊದಲಾಗಿದೆ.

ಕಾಡಾನೆ ಹಾವಳಿ ತಡೆಗೆ ಸ್ಟೀಲ್​ ವೈಯರ್​ ರೋಪ್​ ಬ್ಯಾರಿಕೇಡ್

ಮೈಸೂರು: ಕಾಡಿನಿಂದ ನಾಡಿಗೆ ಬರುವ ಕಾಡಾನೆಗಳ ನಿಯಂತ್ರಣಕ್ಕೆ ನಾಗರಹೊಳೆ ವ್ಯಾಪ್ತಿಯ ಪ್ರದೇಶದಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಇದು ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ರೈಲ್ವೆ ಬ್ಯಾರಿಕೇಡ್ ದಾಟಿ ಕಾಡಾನೆಗಳು ಬರುತ್ತಿವೆ. ಇದನ್ನು ತಡೆಯಲು ಅರಣ್ಯ ಇಲಾಖೆ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಸಿದ್ದು, ಇದು ರಾಜ್ಯದಲ್ಲೇ ಮೊದಲಾಗಿದೆ. ಇದು ಕಾಡಾನೆಗಳು ನಾಡಿಗೆ ಬರದಂತೆ ತಡೆಯಲು ಸಹಕಾರಿಯಾಗಲಿದೆ.

ರೈಲ್ವೆ ಬ್ಯಾರಿಕೇಡ್ ಕೊರತೆ ಹಾಗೂ ದುಬಾರಿ ವೆಚ್ಚದ ಹಿನ್ನೆಲೆಯಲ್ಲಿ ರೋಪ್ ಬ್ಯಾರಿಯರ್​ ಅನ್ನು ಮೊದಲ ಬಾರಿಗೆ ಅಳವಡಿಸಲಾಗಿದ್ದು, 13 ಅಡಿ ಉದ್ದ, 1.5 ಟನ್ ತೂಕದ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸಿಮೆಂಟ್ ಕಂಬಗಳನ್ನು ನಿರ್ಮಿಸಿ ಅವುಗಳನ್ನು 5 ಅಡಿ ಆಳದಲ್ಲಿ ಭೂಮಿಯಲ್ಲಿ ನೆಟ್ಟು, ಆನಂತರ ಸ್ಟೀಲ್ ವೈಯರ್ ರೋಪ್ ಅಳವಡಿಸಲಾಗುತ್ತದೆ. ಈ ರೀತಿಯ ಒಂದು ಪ್ರಯೋಗ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನ ಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಅಳವಡಿಸಲಾಗಿದೆ.

ಮಾನವ ಹಾಗೂ ವನ್ಯಜೀವಿ ಸಂಘರ್ಷಕ್ಕೆ ತಡೆ: ಮಾನವ ಹಾಗೂ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಕಾಡಂಚಿನ ಗ್ರಾಮಗಳಲ್ಲಿ ರೈಲ್ವೆ ಹಳಿಯಲ್ಲಿ ಬ್ಯಾರಿಕೇಡ್ ಹಾಗೂ ಸೋಲಾರ್ ತಂತಿ ಅಳವಡಿಸಿದೆ. ಅದರ ಜೊತೆಗೆ ಈಗ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಇದರಿಂದ ಆನೆಗಳು ನಾಡಿಗೆ ಬರದಂತೆ ತಡೆಯಲು ಸಹಕಾರಿ ಆಗುತ್ತವೆ ಎನ್ನುತ್ತಾರೆ ಅರಣ್ಯ ಅಧಿಕಾರಿಗಳು.

ಸಚಿವರಿಂದ ವೀಕ್ಷಣೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನ ಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಹೊಸ ಪ್ರಯತ್ನವನ್ನು ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಎಸ್.ಟಿ ಸೋಮಶೇಖರ್ ವೀಕ್ಷಣೆ ಮಾಡಿದರು. ಅವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆಯ ನೆರವಿನಿಂದ ಬ್ಯಾರಿಕೇಡ್​​ನ ಗಟ್ಟಿತನವನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು.

ಓದಿ: 2024ರ ಲೋಕಸಭೆ ಎಲೆಕ್ಷನ್​ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಸಚಿವ ಕತ್ತಿ

Last Updated : Jun 22, 2022, 6:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.