ಮೈಸೂರು: ಹೋಂ ಕ್ವಾರಂಟೈನ್ ಆಗಿದ್ದ ಕೋವಿಡ್ ಸೋಂಕಿತ ವ್ಯಕ್ತಿಯ ಮೇಲೆ ಕೆಲವು ಪುಂಡರು ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಾರಪುರ ಗ್ರಾಮದಲ್ಲಿ ನಡೆದಿದೆ.
ಹೋಂ ಕ್ವಾರಂಟೈನ್ ಆಗಿದ್ದ ಕೋವಿಡ್ ಸೋಂಕಿತ ಮನೆಯಿಂದ ಹೊರ ಬಂದಿದ್ದಾರೆ. ಈ ಕಾರಣಕ್ಕೆ ಕೆಲವರು ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಲ್ಲೇಟಿನಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆ್ಯಂಬುಲೆನ್ಸ್ ಮೂಲಕ ಹೆಚ್.ಡಿ ಕೋಟೆ ಪಟ್ಟಣ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಾರಪುರ ಗ್ರಾಮದ ಮುತ್ತಯ್ಯ, ದಾಸೇಗೌಡ, ಬಲರಾಮ ಎಂಬವರಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಈ ಘಟನೆ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ: ಬೆಂಗಳೂರಲ್ಲಿ 15,205 ಮಂದಿಗೆ ತಗುಲಿದ ಕೋವಿಡ್