ETV Bharat / state

ಮೈಸೂರು: ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

author img

By

Published : Oct 12, 2022, 10:23 AM IST

ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ. ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಬಿಜಿಎಸ್ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಘಟನೆ.

Student commits suicide in hostel
ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಬಿಜಿಎಸ್ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ. ಹೆಚ್​​ಡಿ ಕೋಟೆ ತಾಲೂಕಿನ ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಈತ ಕುವೆಂಪು ನಗರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಒಕ್ಕಲಿಗರ ವಿದ್ಯಾರ್ಥಿನಿಲಯದಲ್ಲಿ ವಾಸವಿದ್ದ. ಮಂಗಳವಾರ ಸಂಜೆ 4ರ ಸಮಯದಲ್ಲಿ ಹಾಸ್ಟೆಲ್ ಕೊಠಡಿಯೊಳಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ರಾತ್ರಿ 11.30 ಆದರೂ ಕೊಠಡಿ ಬಾಗಿಲು ತೆರೆಯದ ಹಿನ್ನೆಲೆ ಅಕ್ಕಪಕ್ಕದ ಕೊಠಡಿ ವಿದ್ಯಾರ್ಥಿಗಳು ಹಾಸ್ಟೆಲ್ ಮೇಲ್ವಿಚಾರಕರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಠಡಿ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಶೋಕ ಸಾಮ್ರಾಟನ ನಿಂದಿಸಿದ ಆರೋಪ.. ಮೋಹನ್​ ಭಾಗವತ್​ ವಿರುದ್ಧದ ಕೇಸ್​ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.