ಮೈಸೂರು: ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದಕ್ಕಾಗಿ ದಸರಾ ಉಪಸಮಿತಿಗಳನ್ನು ರಚನೆ ಮಾಡಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಬಿ.ಶರತ್ ಅವರು ಮಾಹಿತಿ ನೀಡದ್ದು, ಕೊರೊನಾದಿಂದ ಈ ಬಾರಿ ವಿಶ್ವವಿಖ್ಯಾತ ದಸರಾ ಮಹೋತ್ಸವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಬೇಕಾಗಿದ್ದು, ಅದಕ್ಕಾಗಿ ಈಗಾಗಲೇ ಸಿಎಂ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟ ಸಭೆ ನಡೆದಿದೆ. ಈಗ ದಸರಾ ಉಪಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸ್ವಾಗತ ಮತ್ತು ಆಮಂತ್ರಣ ಸಮಿತಿ, ದೀಪಾಲಂಕಾರ ಸಮಿತಿ, ಸ್ವಚ್ಚತೆ ಮತ್ತು ವ್ಯವಸ್ಥೆ ಸಮಿತಿ, ಸ್ತಬ್ಧ ಚಿತ್ರ ಸಮಿತಿ, ಮೆರವಣಿಗೆ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಉಪಸಮಿತಿಗಳ ಉಪ ವಿಶೇಷಾಧಿಕಾರಿ, ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸ್ವಾಗತ ಮತ್ತು ಆಮಂತ್ರಣ ಉಪ ಸಮಿತಿ ವಿಶೇಷ ಅಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ಮಂಜುನಾಥ್, ಕಾರ್ಯಾಧ್ಯಕ್ಷರಾಗಿ ಎಂಸಿಸಿ ಹೆಚ್ಚುವರಿ ಆಯುಕ್ತ ಶಶಿಕುಮಾರ್, ಕಾರ್ಯದರ್ಶಿಯಾಗಿ ಎಂಸಿಸಿ ವಲಯ ಆಯುಕ್ತ ಕುಬೇರಪ್ಪ ಅವರನ್ನು ನೇಮಕ ಮಾಡಲಾಗಿದೆ.
ದೀಪಾಲಂಕಾರ ಸಮಿತಿಗೆ ಉಪ ವಿಶೇಷಧಿಕಾರಿಯಾಗಿ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮನೋಹರ್, ಕಾರ್ಯಧ್ಯಕ್ಷರಾಗಿ ಅಧೀಕ್ಷಕ ಇಂಜಿನಿಯರ್ ಮುನಿಗೋಪಾಲ್ ರಾಜ್, ಕಾರ್ಯದರ್ಶಿಯಾಗಿ ಚೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಯೋಗೇಶ್ ಡಿ.ಕೆ ಅವರನ್ನು ನೇಮಿಸಲಾಗಿದೆ. ಇನ್ನು ಸ್ವಚ್ಚತೆ ಸಮಿತಿ ವಿಶೇಷಾಧಿಕಾರಿಯಾಗಿ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಕಾರ್ಯಾ ಧ್ಯಕ್ಷರಾಗಿ ಪಾಲಿಕೆ ಆರೋಗ್ಯಧಿಕಾರಿ ಡಾ.ಜಯಂತ್, ಕಾರ್ಯಾಧ್ಯಕ್ಷರಾಗಿ ಆರೋಗ್ಯಾಧಿಕಾರಿಯಾಗಿ ಡಾ.ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಇನ್ನು ಸ್ತಬ್ಧ ಚಿತ್ರ ಉಪಸಮಿತಿ ವಿಶೇಷಾಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಮುಖ್ಯಯೋಜನಧಿಕಾರಿ ಪಾಂಡೆ, ಕಾರ್ಯಾಧ್ಯಕ್ಷರಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಡಿ.ಕೆ ಲಿಂಗರಾಜು, ಕಾರ್ಯದರ್ಶಿಯಾಗಿ ಖಾದಿ ಮತ್ತು ಗ್ರಾಮೋದ್ಯೋಗ ಮತ್ತು ಕೈಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಮೇಘಳ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.