ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನಾಗೇಂದ್ರ ಮೈಸೂರಿನ ತಮ್ಮ ಆಲನಹಳ್ಳಿ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂಜನಗೂಡು ತಾಲೂಕಿನ ಕೊಡ್ಲಾಪುರ ಗ್ರಾಮದಲ್ಲಿ ಆರು ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ನಾಗೇಂದ್ರ ನಂಜನಗೂಡಿನಲ್ಲಿ 1 ವರ್ಷದಿಂದ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಕೊರೊನಾ ಸಂದರ್ಭದಲ್ಲಿ ನಂಜನಗೂಡು ತಾಲೂಕಿನಲ್ಲಿ ಉತ್ತಮ ಸೇವೆ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಕೊರೊನಾ ತಡೆಗೆ ಸಾಕಷ್ಟು ಶತಪ್ರಯತ್ನ ನಡೆಸಿದ ವೈದ್ಯಾಧಿಕಾರಿ ನಾಗೇಂದ್ರ, ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.