ETV Bharat / state

ಅನಾರೋಗ್ಯದಿಂದ ಬಳಲುತ್ತಿರುವ ಪೊಲೀಸ್ ಸಿಬ್ಬಂದಿಗೆ ಎಸ್.ಪಿ. ಕಿವಿಮಾತು - Mysure Superintendent of Police C. B. Rishyant news

ಸಶಸ್ತ್ರ ದಳದ ಅಧಿಕಾರಿ‌ಗಳು ಮತ್ತು ಸಿಬ್ಬಂದಿ ಕೋವಿಡ್-19 ಗೆ ಸಂಬಂಧಿಸಿದಂತೆ ಜಾಗೃತಿಯಿಂದಿರುವಂತೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸೂಚಿಸಿದ್ದಾರೆ.

Sp
Sp
author img

By

Published : Jul 24, 2020, 12:42 PM IST

ಮೈಸೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 55 ವರ್ಷ ಮೇಲ್ಪಟ್ಟ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದ್ದಾರೆ.

ಡಿಎಆರ್ ನ ಮೈದಾನದಲ್ಲಿ ಬ್ರೀಫಿಂಗ್ ಸೆಷನ್ ನಡೆಸಿ 55 ವರ್ಷ ಮೇಲ್ಪಟ್ಟ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿರುವ ಸಶಸ್ತ್ರ ದಳದ ಅಧಿಕಾರಿ‌ ಮತ್ತು ಸಿಬ್ಬಂದಿಗೆ ಕೋವಿಡ್-19 ಗೆ ಸಂಬಂಧಿಸಿದಂತೆ ಜಾಗೃತಿಯಿಂದಿರುವಂತೆ ಸೂಚಿಸಿದರು.

ಯಾರು ಕೂಡ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಆರೋಗ್ಯಕ್ಕೆ ಸಂಬಂಧಪಟ್ಟಂತೆ ಯಾವುದೇ ತೊಂದರೆ ಕಂಡುಬಂದಲ್ಲಿ‌ ತ್ವರಿತವಾಗಿ ಮೇಲಾಧಿಕಾರಿಗಳ ಗಮನಕ್ಕೆ‌ ತರಬೇಕು. ಗೊಂದಲಕ್ಕೆ ಒಳಗಾಗಬಾರದು ಎಂದರು.

ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.