ಮೈಸೂರು: ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ.
ಇವರು ಮಹದೇವ ನಗರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶಿಕ್ಷಕಿಯ ಪತಿ ಸುರೇಶ್ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ಪಿಎಸ್ಐ ವಿಜಯಕುಮಾರ್, ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದ ಸ್ಥಳ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕಿಯ ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಗಂಡನ ಅನುಮಾನಕ್ಕೆ ಬೇಸತ್ತ ಮಹಿಳೆ.. ವಿಚ್ಛೇದನಕ್ಕೆ ಮುಂದಾದ ಪತ್ನಿ ಕೊಂದ ಪತಿ ಅರೆಸ್ಟ್