ಮೈಸೂರು: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನಿಗೆ ವೈದ್ಯರು ಇಂಜೆಕ್ಷನ್ ನೀಡಿದ ಬಳಿಕ, ಮನೆಗೆ ಬಂದ ಈತ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ಬಾಬುಲಾಲ್ ಪುತ್ರ ರಾಹುಲ್ (19) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ. ಈತ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ಹುಣಸೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡ್ರಿಪ್ಸ್ ಹಾಕಿ ಇಂಜೆಕ್ಷನ್, ಮಾತ್ರೆ ಕೊಟ್ಟು ಕಳುಹಿಸಿದ್ದಾರೆ.
ಬುಧವಾರ ರಾತ್ರಿ ಮನೆಗೆ ಬಂದು ಮಲಗಿದ್ದ ರಾಹುಲ್, ಬೆಳಗ್ಗೆ ಏಳದೇ ಇದ್ದಾಗ ಅನುಮಾನಗೊಂಡ ಪೋಷಕರು ಆತನ ಬಳಿ ಹೋಗಿ ನೋಡಿದಾಗ, ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಓದಿ: ಪತ್ನಿಯೊಂದಿಗೆ ಕಿರಿಕ್ ಮಾಡಿಕೊಂಡ ಡ್ರಗ್ಸ್ ಕೇಸ್ ಆರೋಪಿ: ವೈಭವ್ ಜೈನ್ ಮತ್ತೆ ಜೈಲು ಪಾಲು
ಕೂಡಲೇ ಮೃತದೇಹವನ್ನು ಆಸ್ಪತ್ರೆ ಮುಂದೆ ಇಟ್ಟು, ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಹುಣಸೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.