ETV Bharat / state

ಕಾವೇರಿ ನೀರು ವಿವಾದಕ್ಕೆ ಬೇಕಿದೆ ಶಾಶ್ವತ ಪರಿಹಾರ: ಸುತ್ತೂರು ಶ್ರೀ - ಸುತ್ತೂರು ಮಠ

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಸುತ್ತೂರು ಶ್ರೀ
ಸುತ್ತೂರು ಶ್ರೀ
author img

By ETV Bharat Karnataka Team

Published : Sep 27, 2023, 12:06 PM IST

ಮೈಸೂರು: ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದರು. ಶತಮಾನಗಳಿಂದ ಕಾವೇರಿ ನೀರು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ. ಮೈಸೂರು-ಬೆಂಗಳೂರು ಹಾಗು ಇತರೆಡೆಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ. ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕ ಎಂದರು.

ರಾಜ್ಯ ಸರಕಾರ ಎಲ್ಲ ಸಂದರ್ಭಗಳಲ್ಲಿಯೂ ನೆರೆರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಯಾದರೂ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬಂಧಪಟ್ಟವರು ಯಾರೇ ಆಗಲೀ ದೌರ್ಬಲ್ಯವೆಂದು ಭಾವಿಸಬಾರದು. ಈ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಮಳೆ ಆಧರಿಸಿ ನೀರಿನ ಸಂಗ್ರಹದ ಆಧಾರದಡಿ ನೀರು ಹಂಚಿಕೆಯ ಬಗ್ಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ, ಅನಾವೃಷ್ಟಿಯಾದಾಗಲೆಲ್ಲ ಸಹಜವಾಗಿ ಸಮಸ್ಯೆ ತಲೆದೋರುತ್ತದೆ. ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧಿಕರಣಗಳು ಸಮಾಲೋಚಿಸಿ ಕರ್ನಾಟಕ-ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಿ ನೀರಿನ ಸಂಗ್ರಹಣೆಯ ವಾಸ್ತವಾಂಶ ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಎಂದು ಹೇಳಿದರು.

ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರೆಲ್ಲರೂ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

18 ದಿನಗಳ ಕಾಲ 3,000 ಕ್ಯೂಸೆಕ್​ ನೀರು ಬಿಡಲು ಆದೇಶ: ನಿನ್ನೆ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ 18 ದಿನಗಳ ಕಾಲ 3,000 ಕ್ಯೂಸೆಕ್​​ ನೀರು ಬಿಡಲು ಸಮಿತಿ ಶಿಫಾರಸು ಮಾಡಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರವು 13.09.2023 ರಂದು ಹೊರಡಿಸಿದ ನೂತನ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ.

ಬೆಂಗಳೂರು ಬಂದ್: ರಾಜ್ಯದಲ್ಲಿ ನೀರಿನ ಅಭಾವ ಎದುರಾಗಿದ್ದು ಬರಗಾಲವಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಿನ್ನೆ ರಾಜ್ಯ ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೆಂಗಳೂರು ಬಂದ್​ ನಡೆಸಿದ್ದವು.

ಇದನ್ನೂ ಓದಿ: ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್‌ ಮಾಡ್ತೀವಿ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.