ಮೈಸೂರು: ನೀರಾವರಿ ನಿಗಮ ನಿಯಮಿತ ವತಿಯಿಂದ ತಾರಕ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಗರಿಷ್ಠ ಮಟ್ಟ ತಲುಪುವ ಹಂತದಲ್ಲಿ ಇರುವುದರಿಂದ, ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ನೀರು ಹೊರ ಬಿಡಲಾಗುವುದು.
ಈ ಹಿನ್ನಲೆಯಲ್ಲಿ ತಾರಕ ನದಿಯ ದಂಡೆಯಲ್ಲಿ ವಾಸಿಸುತ್ತಿರುವವರು, ಸಾರ್ವಜನಿಕರು ಹಾಗೂ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ಇರುವವರು ತಮ್ಮ ಆಸ್ತಿ ಪಾಸ್ತಿ, ಜನ ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹೆಚ್.ಡಿ.ಕೋಟೆಯ ತಾರಕ ನಾಲಾ ಉಪ-ವಿಭಾಗದ ಕಾವೇರಿ ನೀರಾವರಿ ನಿಗಮ ನಿಯಮಿತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಸಿ.ರಾಮೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.