ಮೈಸೂರು: ಪಾಲಿಕೆಯ ಮೇಯರ್ ಚುನಾವಣೆಗೆ ಸಂಬಂಧ ಕಾಂಗ್ರೆಸ್ನ ತನ್ವೀರ್ ಸೇಠ್ - ಸಾ. ರಾ. ಮಹೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಫೆ.24ರಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಳೆದ ಎರಡು ವರ್ಷದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಇತ್ತು. ಆದರೆ, ಈ ಬಾರಿ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಆಗುತ್ತದೆ ಎಂದು ಸುದ್ದಿಗಳು ಇದ್ದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಜೆಡಿಎಸ್ನ ಸಾ. ರಾ. ಮಹೇಶ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಮೈತ್ರಿ ಕುರಿತು ಮಾತುಕತೆ ನಡೆಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಈ ಬಾರಿಯೂ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಯಲಿದ್ದು, ಎರಡು ಪಕ್ಷದ ಮುಖಂಡರು ಪಾಲಿಕೆಯ ಸದಸ್ಯರ ಮೀಟಿಂಗ್ ನಡೆಸುತ್ತೇವೆ. ಆನಂತರ ಯಾರು ಮೇಯರ್ ಆಗಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಈ ಬಗ್ಗೆ ಪಕ್ಷದ ರಾಜ್ಯಮಟ್ಟದ ನಾಯಕರು ಸಹ ಮಾತುಕತೆ ನಡೆಸಲಿದ್ದಾರೆ. ಸ್ಥಳೀಯ ಮಟ್ಟದ ಮೈತ್ರಿಯ ಬಗ್ಗೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿಲ್ಲ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾ. ರಾ. ಮಹೇಶ್ ಸ್ಥಳೀಯವಾಗಿ ಎರಡು ಪಕ್ಷದ ನಾಯಕರು ಚೆನ್ನಾಗಿದ್ದೇವೆ. ಮದ್ಯ ಸ್ವಲ್ಪ ಗೊಂದಲವಾಗಿದ್ದು, ಈಗ ಸರಿಯಾಗಿದೆ. ಕಾಂಗ್ರೆಸ್ ಜೊತೆ ಮೈತ್ರಿಗೆ ನಾಳೆ ಪಾಲಿಕೆಯ ಸದಸ್ಯರ ಸಭೆ ನಡೆಸುತ್ತೇವೆ. ಆ ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದರು