ETV Bharat / state

ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು : ಶಾಸಕ ತನ್ವೀರ್ ಸೇಠ್ ವಿಶ್ವಾಸ - ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

ನೆಪಮಾತ್ರಕ್ಕೆ ಅಲ್ಪಸಂಖ್ಯಾತರನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಜನರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮತ ನೀಡಿದ್ದಾರೆ..

tanvir-seth
ಶಾಸಕ ತನ್ವೀರ್ ಸೇಠ್
author img

By

Published : Oct 31, 2021, 6:52 PM IST

ಮೈಸೂರು : ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವಿರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಈ ಕುರಿತು ಅವರು ಮಾತನಾಡಿದರು. ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಒಲವು ವ್ಯಕ್ತವಾಗಿದೆ. ಕೊರೊನಾ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿ ಆಪತ್ಪಾಂದವನಂತೆ ಕೆಲಸ ಮಾಡಿದರು.

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಜೆಡಿಎಸ್ ಎರಡೂ ಕಡೆ ಅಲ್ಪಸಂಖಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಜನರು ಕಾಂಗ್ರೆಸ್ ಪರವಾಗಿದ್ದಾರೆ. ಬಹುತೇಕ ಅಲ್ಪಸಂಖ್ಯಾತರು‌ ಈಗಲೂ ಕಾಂಗ್ರೆಸ್ ಜೊತೆಗಿದ್ದಾರೆ ಎಂದು ತಿಳಿಸಿದರು.

ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಶಾಸಕ ತನ್ವೀರ್ ಸೇಠ್..

ನೆಪಮಾತ್ರಕ್ಕೆ ಅಲ್ಪಸಂಖ್ಯಾತರನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಜನರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮತ ನೀಡಿದ್ದಾರೆ. ಕಾಂಗ್ರೆಸ್ ಸಂವಿಧಾನದ ಆಶಯದ ಸಿದ್ದಾಂತ ಹೊಂದಿದೆ.

ಹಾಗಾಗಿ, ಹೆಚ್ಚಿನ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಬೆಂಬಲ ನೀಡ್ತಾರೆ. ಎರಡು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವ್ಯಾಪಕ ಹಾನಿ ಸಂಭವಿಸಿದೆ. ಮೈಸೂರಿನಲ್ಲೂ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಆದರೆ, ಪರಿಹಾರ ಕಾರ್ಯಾಚರಣೆ ವಿಚಾರದಲ್ಲಿ ನಗರಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

ಕೆಲವೆಡೆ ತಡೆ ಗೋಡೆಗಳನ್ನು ನಿರ್ಮಿಸಲಾಗಿದೆ. ಪರಿಣಾಮ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದೇ ವಸತಿ ಪ್ರದೇಶಗಳಿಗೆ ನುಗ್ಗಿದೆ. ಎಲ್ಲೆಲ್ಲಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಪರಿಹಾರ ಕಾರ್ಯಾಚರಣೆ ಹಾಗೂ ಪರಿಹಾರ ವಿತರಣೆ ಮಾಡುವಾಗ ಸರ್ಕಾರ ತಾರತಮ್ಯ ಮಾಡಬಾರದು‌‌. ಎಲ್ಲಾ ಕ್ಷೇತ್ರಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ವಿಚಾರವಾಗಿ ಮಾತನಾಡಿ, ಈ ಹಿಂದೆಯೂ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿತ್ತು. ಭವಿಷ್ಯದ ದಿನಗಳಲ್ಲಿ ಮತ್ತೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಚಾಮುಂಡಿ ಬೆಟ್ವವನ್ನು ಉಳಿಸಿಕೊಳ್ಳಲು ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.

ಸರ್ಕಾರ ಶೀಘ್ರವಾಗಿ ಮಳೆ ಪರಿಹಾರ ನೀಡಬೇಕು. ಪರಿಹಾರ ಕಾರ್ಯದಲ್ಲಿ ರಾಜಕೀಯ ಬೇಡ. ತಾರತಮ್ಯ ಮಾಡದೇ ತ್ವರಿತ ಗತಿಯಲ್ಲಿ ಪರಿಹಾರ ನೀಡಬೇಕು ಎಂದು ಹೇಳಿದರು.

ಓದಿ: ಕನ್ನಡಿಗರ ಆಸ್ತಿ 'ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ' ಸಿಗಬೇಕು : ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.