ETV Bharat / state

ಚಾಮುಂಡೇಶ್ವರಿ ನಂಜುಂಡೇಶ್ವರನ ದರ್ಶನ ಪಡೆದ ಸಚಿವ ಎಸ್.ಟಿ. ಸೋಮಶೇಖರ್ - ಮೈಸೂರು ದೇವಾಲಯಗಳು ಓಪನ್ ಸುದ್ದಿ

ನಾಡಿನ ಸಮಸ್ತ ಜನತೆಯನ್ನು ಕೊರೊನಾ ಎಂಬ ಮಹಾಮಾರಿಯಿಂದ ದೂರ ಮಾಡುವಂತೆ ನಾಡದೇವತೆ ಚಾಮುಂಡೇಶ್ವರಿ ಹಾಗೂ ಶ್ರೀ ನಂಜುಂಡೇಶ್ವರನಲ್ಲಿ ಪ್ರಾರ್ಥಿಸುವ ಮೂಲಕ ಸರ್ವರಿಗೂ ಒಳಿತನ್ನು ಮಾಡುವಂತೆ ಸಚಿವ ಎಸ್​ ಟಿ ಸೋಮಶೇಖರ್​ ಕೇಳಿಕೊಂಡರು.

ಚಾಮುಂಡಿ ದರ್ಶನ ಪಡೆದ ಎಸ್.ಟಿ.ಸೋಮಶೇಖರ್
ಚಾಮುಂಡಿ ದರ್ಶನ ಪಡೆದ ಎಸ್.ಟಿ.ಸೋಮಶೇಖರ್
author img

By

Published : Jun 8, 2020, 11:44 AM IST

Updated : Jun 8, 2020, 12:28 PM IST

ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮೂರು ತಿಂಗಳಿನಿಂದ ಲಾಕ್​ಡೌನ್ ಆಗಿದ್ದ ಬಾಗಿಲು ಹಾಕಿದ್ದ ದೇವಸ್ಥಾನಗಳು ಸಾರ್ವಜನಿಕರ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ನಾಡಿನ ಸಮಸ್ತ ಜನತೆಯನ್ನು ಕೊರೊನಾ ಎಂಬ ಮಹಾಮಾರಿಯಿಂದ ದೂರ ಮಾಡುವಂತೆ ತಾಯಿ ಚಾಮುಂಡೇಶ್ವರಿ ಹಾಗೂ ಶ್ರೀ ನಂಜುಂಡೇಶ್ವರನಲ್ಲಿ ಪ್ರಾರ್ಥಿಸುವ ಮೂಲಕ ಸರ್ವರಿಗೂ ಒಳಿತನ್ನು ಮಾಡುವಂತೆ ಕೇಳಿಕೊಂಡರು.

ಚಾಮುಂಡೇಶ್ವರಿ, ನಂಜುಂಡೇಶ್ವರನ ದರ್ಶನ ಪಡೆದ ಸಚಿವ ಎಸ್.ಟಿ. ಸೋಮಶೇಖರ್

ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ನಾಗೇಂದ್ರ. ಹರ್ಷವರ್ಧನ್, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಪ್ರಮುಖರು ಹಾಜರಿದ್ದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಆದರೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಬರುವವರ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಿದೆ. ಪೊಲೀಸರು ಮಫ್ತಿಯಲ್ಲಿದ್ದು ಗಮನಿಸುತ್ತಿದ್ದಾರೆ. ಒಂದು ವೇಳೆ ಪ್ರವೇಶ ಕಂಡುಬಂದರೆ ಅವರನ್ನು ವಾಪಸ್ ಕಳುಹಿಸಲಾಗುವುದು ಎಂದರು.

ಚಾಮುಂಡೇಶ್ವರಿ ತಾಯಿ ದರ್ಶನಕ್ಕೆ ಜನ ಕಾಯುತ್ತಿದ್ದರು. ಆಷಾಢ ಮಾಸದ ಸಂದರ್ಭದಲ್ಲಿ ಏನು ಮಾಡಬಹುದು? ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು? ಎಂಬ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಉನ್ನತಾಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆಷಾಢ ಮಾಸ ಆಚರಣೆಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಒಮ್ಮೆ 50 ಸಾವಿರದಿಂದ 1 ಲಕ್ಷ ಮಂದಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಪ್ರವೇಶಕ್ಕೆ ಅನುಮತಿ ಕೊಡಬೇಕು ಎಂಬ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸೋಮಶೇಖರ್​ ಮಾಹಿತಿ ನೀಡಿದರು.

Last Updated : Jun 8, 2020, 12:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.