ಮೈಸೂರು: ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಪತ್ರಾಂಕಿತ ವ್ಯವಸ್ಥಾಪಕ, ಮಂಡ್ಯ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಲ್. ತಾಂಡವಮೂರ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಪತ್ನಿ ಕೊಡಗು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿದೆ.