ಮೈಸೂರು: ಜಾನುವಾರುಗಳನ್ನು ತಿಂದು ತೇಗಿ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ ಚಿರತೆ, ಕೊನೆಗೂ ಬೋನಿಗೆ ಬೀಳುವ ಮೂಲಕ ಜನರ ಆತಂಕ ದೂರ ಮಾಡಿದೆ.
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ತಡರಾತ್ರಿ ಆಹಾರ ಅರಸಿ ಬಂದ 4 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದು ಅರ್ಭಟಿಸುತ್ತಿದ್ದ ದೃಶ್ಯ ನೋಡಿದ ಗ್ರಾಮಸ್ಥರು, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಯನ್ನ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲು ನಿರ್ಧರಿಸಿದ್ದಾರೆ.
ಒಂದು ತಿಂಗಳಿನಿಂದ ಜಾನುವಾರುಗಳನ್ನು ತಿನ್ನುತ್ತಿತ್ತು. ರಾತ್ರಿ ಆದ ಕೂಡಲೇ ಗ್ರಾಮಸ್ಥರು ಮನೆಯಿಂದ ಆಚೆ ಬಾರದಂತೆ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ ಬೀಳುವ ಮೂಲಕ ಭಯ ದೂರ ಮಾಡಿದೆ.