ETV Bharat / state

ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರ: ಸರ್ಕಾರದ ಮಟ್ಟದಲ್ಲಿ ಚರ್ಚೆ ಎಂದ ಸಿಎಂ - ಮುಖ್ಯಮಂತ್ರಿ ಸಿದ್ದರಾಮಯ್ಯ

The issue of withdrawing the hijab ban: ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

The issue of withdrawing the hijab ban
ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
author img

By ETV Bharat Karnataka Team

Published : Dec 23, 2023, 2:39 PM IST

Updated : Dec 23, 2023, 7:34 PM IST

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಯಾವ ಶೈಕ್ಷಣಿಕ ವರ್ಷದಿಂದ ಹಿಜಾಬ್​ ನಿಷೇಧ ವಾಪಸ್​​ ಪಡೆಯಲಾಗುವುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಇನ್ನೂ ಚರ್ಚೆ ಮಾಡಲಾಗುತ್ತಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿನ್ನೆ ನೀಡಿದ್ದ ಹೇಳಿಕೆ ಏನು?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಲಿದೆ. ಯಾವ ಬಟ್ಟೆ​​ ಹಾಕಿಕೊಳ್ಳಬೇಕು ಎನ್ನುವುದು ಅವರವರಿಗೆ ಬಿಟ್ಟ ವಿಚಾರ ಎಂದು ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಹೇಳಿಕೆ ನೀಡಿದ್ದರು.

ಎಲ್ಲರೂ ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ನಾನು ಧೋತಿ, ಜುಬ್ಬ ಹಾಕಿಕೊಳ್ಳುವೆ, ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೊಳ್ಳಿ, ಅದರಲ್ಲಿ ತಪ್ಪೇನಿದೆ? ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್​ ಸಚಿವರ ಪ್ರತಿಕ್ರಿಯೆ

ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಮಲ್ಲಿಕಾರ್ಜುನ್‌: ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಎಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ಆದೇಶ ಹಿಂಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್‌ ಸಮರ್ಥಿಸಿಕೊಂಡಿದ್ದಾರೆ.‌

ದಾವಣಗೆರೆಯ ಎಂಬಿಎ ಗ್ರೌಂಡ್​ನಲ್ಲಿ ನಡೆಯುತ್ತಿರುವ 24ನೇ ಮಹಾ ಅಧಿವೇಶನಕ್ಕೆ ಆಗಮಿಸಿದ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಅವರವರ ಸಮುದಾಯಕ್ಕೆ ಅವರದ್ದೇ ಅದ ಸಂಪ್ರದಾಯ ಇರುತ್ತೆ. ಅದರಲ್ಲಿ ರಾಜಕೀಯ ಮಾಡೋದು ಸರಿಯಲ್ಲ. ಹಿಜಾಬ್ ಹಿಂಪಡೆಯುವ ಬಗ್ಗೆ ಸಿಎಂ ಹೇಳಿದ್ದು ಸರಿ ಇದೆ. ಅವರ ಹೇಳಿಕೆಗೆ ನಮ್ಮ ಬೆಂಬಲ ಇದೆ ಎಂದರು.

ಸಚಿವ ಈಶ್ವರ್ ಖಂಡ್ರೆ: ಹಿಜಾಬ್ ನಿಷೇಧ ವಾಪಸ್​ ಪಡೆಯುವ ಸರ್ಕಾರದ ನಿರ್ಧಾರವನ್ನು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸಮರ್ಥಿಸಿಕೊಂಡರು. ಸಂವಿಧಾನದಲ್ಲಿ ಎಲ್ಲ ಧರ್ಮದವರಿಗೂ ಅವರದ್ದೇ ಸ್ವಾತಂತ್ರ್ಯ ಇದೆ. ಊಟ, ಬಟ್ಟೆಗೆ ಸಂಬಂಧಿಸಿದಂತೆ ಸಂವಿಧಾನದಲ್ಲೇ ಅವಕಾಶ ನೀಡಲಾಗಿದೆ. ಹಾಗಾಗಿ ಹಿಜಾಬ್ ವಿಚಾರವಾಗಿ ಸರ್ಕಾರ ತೆಗೆದುಕೊಂಡ ತೀರ್ಮಾನದ ಬಗ್ಗೆ ನಮ್ಮ ಬೆಂಬಲವಿದೆ ಎಂದರು.

ಮಧು ಬಂಗಾರಪ್ಪ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿಜಾಬ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವೇ ನಮ್ಮ ನಿರ್ಧಾರ ಎಂದು ತಿಳಿಸಿದ್ದಾರೆ.

ಹಿಜಾಬ್ ವಿಚಾರದಲ್ಲಿ ಬಿಜೆಪಿ ಆ ರೀತಿ ನಡೆದುಕೊಂಡ ಕಾರಣಕ್ಕೆ ಅವರು ಸೋತಿದ್ದು. ಸಿಎಂ ಸಿದ್ದರಾಮಯ್ಯ ಹಿಜಾಬ್ ಬಗ್ಗೆ ಮಾತನಾಡಿ, ಹೃದಯ ಶ್ರೀಮಂತಿಕೆ ತೋರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಅಲ್ಲಿಯವರೆಗೆ ಇರಲಿಲ್ಲ ಹಿಜಾಬ್​ ವಿಚಾರ, ಆದರೆ ಕಳೆದ ಬಾರಿ ಚುನಾವಣೆ ಬಂದಾಗ ಬಿಜೆಪಿಯವರು ಹಿಜಾಬ್ ವಿಷಯವನ್ನು ತಂದಿದ್ದಾರೆ. ಎಲ್ಲ ಧರ್ಮಗಳಿಗೂ ಗೌರವ ಕೊಡಬೇಕು. ಈ ವಿಚಾರ ಕೋರ್ಟ್​ನಲ್ಲೂ ಇದೆ. ಅದನ್ನೂ ವಿಮರ್ಶೆ ಮಾಡಿಕೊಂಡು, ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಹಿಜಾಬ್ ವಿಚಾರದಲ್ಲಿ ರಾಜ್ಯದಲ್ಲಿ ಗಲಭೆಯಾದರೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿ, ದಂಗೆ ಮಾಡುವವರೇ ಹೀಗೆ ಹೇಳೋದು. ಕಾನೂನು ಬಹಳ ಗಟ್ಟಿಯಾಗಿದೆ, ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು. ಅದೇ ರೀತಿ ಹಿಜಾಬ್​ಗೂ ಸಹ ಗೌರವ ಕೊಡಬೇಕು ಎಂದರು.

ಸಚಿವ ಸಂತೋಷ್​ ಲಾಡ್​: ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ ಲಾಡ್, ಸಂವಿಧಾನಾತ್ಮಕವಾಗಿ ಅದಕ್ಕೆ ಅವಕಾಶವಿರುವಾಗ ಸಿಎಂ ಮಾತನಾಡಿರುವುದರಲ್ಲಿ ತಪ್ಪೇನಿದೆ? ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ ಮಾಡಲಿ. ವಿರೋಧ ಪಕ್ಷಗಳ ದೃಷ್ಟಿಕೋನ ಹಾಗಿದೆ. ಹಾಗಾದರೆ ಅವರು ಹೇಳುವ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎಂದರೆ ಏನು? ನಾವು ಎಲ್ಲಾ ಧರ್ಮದವರನ್ನು ಒಂದೇ ರೀತಿ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ ವಿವಿಧ ನಿಯಮಗಳ ವಾಪಸ್ ವಿಚಾರದ ಕುರಿತು ಮಾತನಾಡಿದ ಅವರು, ಹಿಜಾಬ್ ನಿಷೇಧ ವಾಪಸ್​ ಪಡೆಯಲು ಯೋಚಿಸಿರುವಂತೆ, ಇತರೆ ನಿಯಮಗಳ ಬಗ್ಗೆಯೂ ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕೋ, ಆ ರೀತಿ ಮಾಡಲಾಗುತ್ತದೆ. ಆ ರೀತಿ ಮಾಡುವಲ್ಲಿ ಸಿಎಂ ಪರಿಶೀಲಿಸುತ್ತಿದ್ದಾರೆ ಎಂದರು.

ತಂಗಡಗಿ, ಗುಂಡೂರಾವ್ ಪ್ರತಿಕ್ರಿಯೆ: ಕೊಪ್ಪಳದಲ್ಲಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಧರ್ಮದ ಹೆಸರೇಳಿಕೊಂಡು ರಾಜಕಾರಣ ಮಾಡುವವರು ಬಿಜೆಪಿಯವರು. ಹಿಜಾಬ್ ವಿಷಯದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ ಎಂದರೆ, ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ಸಚಿವ ದಿನೇಶ್ ಗುಂಡೂರಾವ್, ಯಾವ ವ್ಯವಸ್ಥೆಯಲ್ಲಿ ಇಷ್ಟು ದಿನ ನಮ್ಮ ದೇಶ, ರಾಜ್ಯ ನಡೆದುಕೊಂಡು ಬಂದಿದೆಯೋ, ಅದನ್ನು ಮುಂದುವರೆಸಿಕೊಂಡು ಹೋಗ್ಬೇಕು. ಇದೀಗ ಸಿದ್ದರಾಮಯ್ಯನವರು ಸರಿಯಾದ ನಿರ್ಧಾರ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

Last Updated : Dec 23, 2023, 7:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.