ಮೈಸೂರು: ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರ ಸೌಲಭ್ಯಗಳಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಲಾಕ್ಡೌನ್ ಇರುವ ಕಾರಣ ಮೃಗಾಲಯದ ಪ್ರಾಣಿ ಪಕ್ಷಿಗಳಿಗೆ ಆಹಾರದ ಸೌಲಭ್ಯ ಕಲ್ಪಿಸಲು ಆರ್ಥಿಕ ಸಹಾಯ ಮಾಡುವಂತೆ ಇನ್ಫೋಸಿಸ್ನ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.

ಇನ್ನು ಮೃಗಾಲಯಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಅವರೂ ಕೂಡ ತಮ್ಮ ಕ್ಷೇತ್ರದ ದಾನಿಗಳಿಂದ ಹಣ ಸಂಗ್ರಹಿಸಿ ಮೃಗಾಲಯದ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.