ಮೈಸೂರು: ಸಾಲಬಾಧೆಯಿಂದ ತಾಯಿ-ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಈಚನೂರು ಗ್ರಾಮದಲ್ಲಿ ನಡೆದಿದೆ.
ಸುರೇಶ್ ಎಂಬುವರ ಪತ್ನಿ ಲೋಲಾಕ್ಷಿ (28) ಮತ್ತು ಪುತ್ರಿ ಸಂಧ್ಯಾ (10) ಮೃತ ದುರ್ದೈವಿಗಳು. ಸುರೇಶ್ ಈಚನೂರು ಗ್ರಾಮದಲ್ಲಿ 2 ಎಕರೆ ಜಮೀನು ಹೊಂದಿದ್ದು, ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲಗಾರರು ಮನೆಗೆ ಬಂದು ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ತಾಯಿ-ಮಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅಕ್ಕ ಪಕ್ಕದವರು ಇವರನ್ನ ಗಮನಿಸಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದು, ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.