ಮೈಸೂರು : ಚಾಮುಂಡಿ ಬೆಟ್ಟಕ್ಕೆ ಲಾಕ್ ಡೌನ್ ಬಳಿಕ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, 42 ದಿನಗಳಲ್ಲಿ ಕಾಣಿಕೆ ಹುಂಡಿಯಲ್ಲಿ ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ .
ಲಾಕ್ಡೌನ್ ಬಳಿಕ ಚಾಮುಂಡಿ ಕಾಣಿಕೆಯಲ್ಲಿ ಸುಧಾರಣೆಯಾಗಿದ್ದು, ಚಾಮುಂಡೇಶ್ವರಿ ದೇವಸ್ಥಾನದಲ್ಲಿ 1,33,25,302 ರೂ. ಕಾಣಿಕೆ ಸಂಗ್ರಹವಾಗಿದೆ. ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ 60ಕ್ಕೂ ಹೆಚ್ಚು ಮಂದಿಯಿಂದ ಹುಂಡಿ ಎಣಿಕೆ ಮಾಡಲಾಯಿತು. ಕೊರೊನಾ ಕಡಿಮೆಯಾಗುತ್ತಿದ್ದಂತೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಆಗಮನ ಹೆಚ್ಚಾಗಿದೆ.
ಡಿಸೆಂಬರ್ 17 ರಿಂದ ಜ.27 ರವರೆಗೆ 42 ದಿನದಲ್ಲಿ 1,33,25,302 ರೂ ಕಾಣಿಕೆ ಸಂಗ್ರಹವಾಗಿದೆ. ಚಿನ್ನ 253 ಗ್ರಾಂ, ಬೆಳ್ಳಿ 810 ಗ್ರಾಂ ಸಂಗ್ರಹವಾಗಿದೆ. ಭಕ್ತರ ಸಂಖ್ಯೆ ಹೆಚ್ಚಾದಂತೆ, ಕಾಣಿಕೆಯ ಮೊತ್ತ ಕೂಡಾ ಹೆಚ್ಚಾಗಿದೆ.
ಓದಿ : ಮುಂದುವರಿದ "ಮಹಾ" ಪುಂಡಾಟಿಕೆ : KSRTC ಬಸ್ ಮೇಲೆ ಮರಾಠಿ ಪೋಸ್ಟರ್ ಅಂಟಿಸಿದ ಪುಂಡರು