ETV Bharat / state

ರಾಷ್ಟ್ರಪತಿಗಳಿಂದ ನಾಳೆ ನಾಡಹಬ್ಬ ದಸರಾ ಉದ್ಘಾಟನೆ : ಸಚಿವ ಸೋಮಶೇಖರ್

ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್ ​ಟಿ ಸೋಮಶೇಖರ್​ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

the-president-will-inaugurate-dasara-tomorrow
ರಾಷ್ಟ್ರಪತಿಗಳಿಂದ ನಾಳೆ ನಾಡಹಬ್ಬ ದಸರಾ ಉದ್ಘಾಟನೆ : ಸಚಿವ ಸೋಮಶೇಖರ್
author img

By

Published : Sep 25, 2022, 3:19 PM IST

Updated : Sep 25, 2022, 3:46 PM IST

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆ ನಾಳೆ ನಡೆಯಲಿದ್ದು, ಉದ್ಘಾಟಕರಾಗಿ ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಸರಾದ ಎಲ್ಲಾ ಸಿದ್ಧತೆ ಅಂತಿಮವಾಗಿದೆ. ರಾಷ್ಟ್ರಪತಿ ಕಚೇರಿಯಿಂದ ಬಂದ ಸೂಚನೆಯಂತೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮವನ್ನು ವೀಕ್ಷಿಸಬಹುದು ಎಂದು ಹೇಳಿದರು.

ರಾಷ್ಟ್ರಪತಿಗಳಿಂದ ದಸರಾ ಉದ್ಘಾಟನೆ : ವೇದಿಕೆ ಮೇಲೆ ರಾಷ್ಟ್ರಪತಿಗಳು ಸೇರಿದಂತೆ 13 ಗಣ್ಯರು ಇರಲಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳು, ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ನಂತರ ವೇದಿಕೆಗೆ ಆಗಮಿಸಿ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಇಲ್ಲಿನ ಬುಡಕಟ್ಟು ಸಮುದಾಯವರನ್ನು ಭೇಟಿ ಮಾಡಿ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಹೇಳಿದರು.

ವೇದಿಕೆ ಸಿದ್ಧತೆ, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಿಂದ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಪಡೆದರು.

ರಾಷ್ಟ್ರಪತಿಗಳಿಂದ ನಾಳೆ ನಾಡಹಬ್ಬ ದಸರಾ ಉದ್ಘಾಟನೆ : ಸಚಿವ ಸೋಮಶೇಖರ್

ಬುಡಕಟ್ಟು ಸಮುದಾಯದವರೊಂದಿಗೆ ಮಾತುಕತೆ : ಬುಡಕಟ್ಟು ಜನರ ಭೇಟಿಗೆ ಮತ್ತು ಫೋಟೋ ಶೇಷನ್​ಗಾಗಿ 10ನಿಮಿಷ ಕಾಲವಾಕಾಶ ಮೀಸಲಿಡುವಂತೆ ಅವರಲ್ಲಿ ಮನವಿ ಮಾಡಲಾಗಿದ್ದು, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ರಾಷ್ಟ್ರಪತಿಗಳೊಂದಿಗೆ ಫೋಟೋ ತೆಗೆಸಿಕೊಳ್ಳುವುದಕ್ಕೆ ದೇವಸ್ಥಾನದ ಬಲಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ. ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಭಾಗದಿಂದ ಬುಡಕಟ್ಟು ಸಮುದಾಯದ 14 ಜನರು ಆಗಮಿಸಲಿದ್ದಾರೆ ಎಂದು ಹೇಳಿದರು.

ರಾಜಕೀಯವಾಗಿ ಎದುರಿಸುತ್ತೇನೆ : ರಾಷ್ಟ್ರಪತಿಗಳೊಂದಿಗೆ ವೇದಿಕೆ ಹಂಚಿಕೊಳ್ಳಬಾರದೆಂದು ಆಪ್ ಪತ್ರ ಬರೆದಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದರಲ್ಲಿ ಅನಾವಶ್ಯಕವಾಗಿ ನನ್ನ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ರಾಜಕೀಯ ಮಾಡುತ್ತಿದ್ದು, ಅದನ್ನು ರಾಜಕೀಯವಾಗಿ ಎದುರಿಸುತ್ತೇನೆ ಎಂದು ಟಾಂಗ್​ ಕೊಟ್ಟರು.

ನಾವು ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವರ್ಕ್ ಆರ್ಡರ್‌ ನೀಡಿದ್ದಾರೆ. ಇದರಲ್ಲಿ ನಮ್ಮ ಪಾತ್ರ ಇಲ್ಲ, ಯಾವುದೇ ವ್ಯವಹಾರ ಇಲ್ಲ. ಕಡತಗಳು ಅಧ್ಯಕ್ಷರಿಗೆ ಬರಲ್ಲ ಮತ್ತು ಯಾವ ಕಡತಕ್ಕೂ ಸಹಿ ಕೂಡ ಹಾಕಿಲ್ಲ. ಹಣಕಾಸಿನ ಯಾವುದೇ ವ್ಯವಹಾರ ಮಾಡಿಲ್ಲ. ರಾಜಕೀಯವಾಗಿ ಮಾಡಿದ್ದಾರೆ, ರಾಜಕೀಯವಾಗಿ ಎದುರಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಮೈಸೂರು ದಸರಾ: ಉದ್ಘಾಟನೆಗೆ ಸಿದ್ಧವಾದ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ

Last Updated : Sep 25, 2022, 3:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.