ಮೈಸೂರು : ಶಾಸಕ ಜಿ ಟಿ ದೇವೇಗೌಡರ ಮೊಮ್ಮಗಳು ಮೃತಪಟ್ಟ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಜಿ.ಟಿ. ದೇವೇಗೌಡ ಅವರೇ, ನಿಮ್ಮ ಮೊಮ್ಮಗಳಾದ ಗೌರಿ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ ಅವಳು ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು ಎಂದಿದ್ದಾರೆ.
ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ. ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ.
ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು