ಮೈಸೂರು: ಮನುಷ್ಯನಿಗೆ ಸಾವು ಎಲ್ಲಿ, ಹೇಗೆ ಬರುತ್ತದೋ ಗೊತ್ತಿಲ್ಲ.ಇದಕ್ಕೆ ಮೈಸೂರಿನಲ್ಲಿ ನಡೆದ ಈ ದುರಂತವೇ ಸಾಕ್ಷಿ.
ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯ ಮುಂದೆ ಕ್ರಿಕೆಟ್ ಆಟವಾಡುತ್ತಿದ್ದ 6 ವರ್ಷದ ಬಾಲಕ ಅಭಯ್ ಮೇಲೆ ತೆಂಗಿನ ಮರ ಬಿದ್ದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕನ ಜೊತೆ ಆಟವಾಡುತ್ತಿದ್ದ ಬಾಲಕಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆತ್ತಮ್ಮನ ಆಕ್ರಂದನ ಮುಗಿಲು ಮುಟ್ಟಿತ್ತು.