ಮೈಸೂರು: ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದ ಶಿಕ್ಷಕನನ್ನು ಅಮಾನತು ಮಾಡಿ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಮಾಡಿದ್ದಾರೆ.

ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ ಶಾಲೆಯ ಶಿಕ್ಷಕ ಗ್ರಾಮದ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸೊಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿಕ್ಷಕನನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜ ಉಪನಿರ್ದೇಕರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಅನ್ವಯ ಶಿಕ್ಷಕ ಸಿದ್ದರಾಜು ಅವರನ್ನು ಅಮಾನತುವಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.
