ETV Bharat / state

ಐತಿಹಾಸಿಕ ಮೂಗೂರು ಶ್ರೀ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಕಳ್ಳತ‌ನ - ಮೈಸೂರು ಕಳ್ಳತನ ಪ್ರಕರಣ

ಮೂಗೂರು ಶ್ರೀ ತ್ರಿಪುರ ಸುಂದರಿ ದೇವಿಯ ಚಿನ್ನಾಭರಣ ಕಳ್ಳತನವಾಗಿದೆ.

theft in mooguru shree tripura sundari temple
ಮೂಗೂರು ಶ್ರೀ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಕಳ್ಳತ‌ನ
author img

By

Published : Jul 17, 2022, 1:13 PM IST

ಮೈಸೂರು: ಐತಿಹಾಸಿಕ, ಪುರಾತನ ಮೂಗೂರು ಶ್ರೀ ತ್ರಿಪುರ ಸುಂದರಿ ಅಮ್ಮನ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದೆ. ದೇವಿ ಮೂರ್ತಿಯ ಮೈ ಮೇಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ ನಗದು ಕಳ್ಳತನವಾಗಿದೆ.

ದೇವಸ್ಥಾನದ ಹಿಂಭಾಗದಿಂದ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಳ್ಳರು ಕಳ್ಳತನ ನಡೆಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನ ದಳ ಹಾಗೂ ಬೆರಳಚ್ಚು ತಂಡ ಸಿಬ್ಬಂದಿಯಿಂದ ಸ್ಥಳ ಮಹಜರು ನಡೆಸಲಾಗಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ: ಗುಂಡೇರಿಸಿಕೊಂಡು ಗುರಾಯಿಸಿದ್ದಕ್ಕೆ ಬಾಟಲಿಯಲ್ಲಿ ಹೊಡೆದಾಡಿದ ರೌಡಿಗಳು

ನರಸೀಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಕರಣಗಳನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.