ETV Bharat / state

ಸಿಕ್ಕಾಪಟ್ಟೆ ಲೀಡರ್​ಗಳಾಗಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಬಿ ಎಲ್ ಸಂತೋಷ್ - ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್.

B L Santhosh
ಬಿ ಎಲ್ ಸಂತೋಷ್
author img

By

Published : Apr 21, 2023, 4:09 PM IST

ಮೈಸೂರು: ರಾಜ್ಯದಲ್ಲಿ ಈಗ ಸಿಕ್ಕಾಪಟ್ಟೇ ಲೀಡರ್​ಗಳಾಗಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಮಾಧ್ಯಮದವರು ಪ್ರತಿಕ್ರಿಯೆಗೆ ಸಂಪರ್ಕಿಸಿದಾಗ ಮಾರ್ಮಿಕವಾಗಿ ಹೇಳಿ, ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಮೈಸೂರಿನ ಚುನಾವಣಾ ಕಣ ರಂಗೇರುತ್ತಿದ್ದು, ಈ ಚುನಾವಣಾ ಕಣಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಅವರು ಇಂದು ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಮೈಸೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರು ಪ್ರತಿಕ್ರಿಯೆಗೆ ಪ್ರಯತ್ನಿಸಿದಾಗ, ಈಗ ರಾಜ್ಯದಲ್ಲಿ ಸಿಕ್ಕಾಪಟ್ಟೆ ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲೂ ಬಯಸುವುದಿಲ್ಲ ಎಂದು, ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.

ನನ್ನನ್ನು ಮಾಧ್ಯಮದವರು ಮಾತನಾಡಿಸಲು ನೂರು ಬಾರಿ ಪ್ರಯತ್ನ ಮಾಡಿದ್ದಾರೆ. ನಾನು ಯಾರಿಗೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ನಮ್ಮಲ್ಲಿ ಮಾತನಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರು ಮಾತನಾಡಲಿ, ನಾನು ಯಾರಿಗೂ ಮಾತನಾಡಿ ಪ್ರತಿಸ್ಪರ್ಧಿ ಏಕೆ ಆಗಲಿ ಎಂದು ಬಿ ಎಲ್ ಸಂತೋಷ್ ಮಾಧ್ಯಮದವರು ಮಾತನಾಡಿಸಲು ಎಷ್ಟೇ ಪ್ರಯತ್ನಪಟ್ಟರು ಮಾತನಾಡಲು ನಿರಾಕರಿಸಿದರು.

ವಾಸು ಆಪ್ತ ಬಿಜೆಪಿಗೆ: ನಗರದ ಮಾಜಿ ಕಾಂಗ್ರೆಸ್ ಶಾಸಕ ವಾಸು ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಪ್ತ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್ ಗೌಡ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಾಗೂ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ ಗ್ರಾಮಸ್ಥರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.