ಮೈಸೂರು: ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆಯುವ ಭಕ್ತರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದೆ. ಅಲ್ಲದೇ ಮಾಸ್ಕ್ ಧರಿಸಿದ್ದರೆ ಮಾತ್ರ ಒಳಗೆ ಬಿಡಲಾಗುತ್ತಿದೆ.
ರಾಜ್ಯಾದ್ಯಂತ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಹಾಗೂ ಪ್ರವಾಸಿ ಸ್ಥಳಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ನಂಜನಗೂಡು ನಂಜುಂಡೇಶ್ವರ ದೇವಸ್ಥಾನದಲ್ಲಿ ನಂಜುಂಡೇಶ್ವರನ ದರ್ಶನ ಪಡೆಯುವ ಭಕ್ತರಿಗೆ ದೇವಸ್ಥಾನದ ಹೊರಭಾಗದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಿ ಟೆಂಪರೇಚರ್ ಸರಿ ಇದ್ದರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
ಅಲ್ಲದೇ ಸಾಮಾಜಿಕ ಅಂತರ ಕಡ್ಡಾಯವಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಶುಕ್ರವಾರ ನಂಜನಗೂಡಿನಲ್ಲಿ ಸರಳವಾಗಿ ರಥೋತ್ಸವ ನಡೆಯಲಿದ್ದು, ತಾಲೂಕು ಆಡಳಿತ ಸಜ್ಜಾಗಿದೆ.