ETV Bharat / state

ಉಂಡ ಮನೆಗೆ ಕನ್ನ ಹಾಕಿದ ದುರುಳ... 2.50 ಲಕ್ಷ ಮೌಲ್ಯದ ಚಿನ್ನ ಕದ್ದ ಆರೋಪಿ ಸೆರೆ - ಮೈಸೂರು ಕಳ್ಳತನ ಸುದ್ದಿ

ಮೈಸೂರು ನಗರದಲ್ಲಿ ಸಂಬಂಧಿಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಯುವಕನನ್ನು ಬಂಧಿಸಿ, ಆತನಿಂದ 2.50 ಲಕ್ಷ ರೂ. ಮೌಲ್ಯದ 90 ಗ್ರಾಂ. ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

2.50 ಲಕ್ಷ ಮೌಲ್ಯದ ಚಿನ್ನ ಕದ್ದ ಆರೋಪಿ ಸೆರೆ
author img

By

Published : Feb 19, 2020, 6:22 AM IST

ಮೈಸೂರು : ಸಂಬಂಧಿಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಪಟ್ಟಣದ ಅಭಿಷೇಕ್‌ಗೌಡ (26) ಬಂಧಿತ ಯುವಕ. ಗುರುಮಲ್ಲೇಶ್ವರ ಬಡಾವಣೆಯ ಮನೆಯೊಂದರಲ್ಲಿ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಮನೆಯಲ್ಲಿ ವಾಸವಾಗಿದ್ದ ಸಂಬಂಧಿ ಅಭಿಷೇಕ್ ಎಂಬಾತನ ಮೇಲೆ ಮನೆಯವರು ಅನುಮಾನ ವ್ಯಕ್ತಪಡಿಸಿದ್ದರು. ಈ ಸಂಬಂದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಮೈಸೂರಿನಲ್ಲಿ ಪತ್ತೆ ಮಾಡಿದ್ದಾರೆ. ಬಂಧಿತನಿಂದ 2.50 ಲಕ್ಷ ರೂ. ಮೌಲ್ಯದ 90 ಗ್ರಾಂ. ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದುಕೊಂಡು ಅವರ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.