ಮೈಸೂರು : ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಪಿರಿಯಾಪಟ್ಟಣ ಬಳಿಯ ಕಂಪಲಾಪುರ ಗ್ರಾಮದ ಬಳಿ ಇಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೌದೆ ತುಂಬಿಕೊಂಡು ನಿಂತಿದ್ದ ಟ್ರಾಕ್ಟರ್ಗೆ ಕಂಪಲಾಪುರ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮುದಾಸಿರ್, ಮುಜಾಹಿದ್ ಹಾಗೂ ಅಹ್ಮದ್ ಪಾಷಾ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಪಿರಿಯಾಪಟ್ಟಣ ಆಸ್ಪತ್ರೆಗೆ ಸಾಗಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಗ್ರಾಮಸ್ಥರು ಪೊಲೀಸರಿಗೆ ಸಹಾಯ ಮಾಡಿದರು.
ಇದನ್ನೂ ಓದಿ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ.. ಟ್ರಾಫಿಕ್ ಜಾಮ್