ಮೈಸೂರು: ಬಸ್ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಕಡೆಯಿಂದ ಕೇರಳ ನೋಂದಣಿ ಇದ್ದ ಬೈಕ್ ಸವಾರ ಸಾಯಿಮಾನ್ ಸೇಠ್ ಎಂಬಾತ ವೇಗವಾಗಿ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಅಡ್ಡಲಾಗಿ ಬಂದ ಮೊಪೆಡ್ಗೆ ಗುದ್ದಿದ್ದಾನೆ. ನಿಯಂತ್ರಣ ತಪ್ಪಿದ ಬೈಕ್ ಬಸ್ಗೆ ಕಾಯುತ್ತಿದ್ದ ಇನ್ನಿಬ್ಬರ ಮೇಲೆ ಹರಿದು ಚಿಕ್ಕಣ್ಣಮ್ಮ ,ಬಸವರಾಜು ಹಾಗೂ ದಾಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ವ್ಯಕ್ತಿ ಕೇರಳದವ ಎನ್ನಲಾಗಿದೆ. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.