ಮೈಸೂರು: ಮೆಕ್ಕೆಜೋಳ ಹೇರಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದಿದೆ.

ಟಿ ನರಸೀಪುರ ತಾಲೂಕಿನ ಹೊಸೂರು ಗ್ರಾಮದ ಮಹದೇವು, ತೇಜು ಮತ್ತು ಮಹದೇವ್ ನಾಯಕ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಕೂಲಿ ಕಾರ್ಮಿಕರೆಂದು ತಿಳಿದು ಬಂದಿದೆ.
ಮೆಕ್ಕೆಜೋಳದ ಮೇವು ತುಂಬಿದ್ದ ಲಾರಿಗೆ ವಿದ್ಯುತ್ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಕೂಲಿ ಕಾರ್ಮಿಕರರಿಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವ ಕೂಲಿ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾನೆ ಎನ್ನಲಾಗುತ್ತಿದೆ.

ಕೀಳನಪುರದಿಂದ ಪಿಂಜರಾಪೂಲಿಗೆ ಮೇವು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವರುಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.