ETV Bharat / state

ಹುಲಿ ದಾಳಿ ಪ್ರಕರಣ : ವ್ಯಾಘ್ರನ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ - ದರ್ಶನ್ ಧ್ರುವನಾರಾಯಣ್ - ಹುಲಿ ಸೆರೆ

ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಪ್ರಾರಂಭಿಸುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದ್ದಾರೆ.

ದರ್ಶನ್ ಧ್ರುವನಾರಾಯಣ್
ದರ್ಶನ್ ಧ್ರುವನಾರಾಯಣ್
author img

By ETV Bharat Karnataka Team

Published : Nov 1, 2023, 6:09 PM IST

ಮೈಸೂರು : ಹಸುವನ್ನು ಬಲಿ ಪಡೆದು ದನಗಾಹಿ ಮೇಲೆ ದಾಳಿ ನಡೆಸಿದ ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಪ್ರಾರಂಭಿಸುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವೀರಭದ್ರ ಭೋವಿ ಅವರಿಗೆ ಖರ್ಚು ವೆಚ್ಚಗಳನ್ನು ಸರ್ಕಾರ ಮತ್ತು ಅರಣ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ತಾವು ಕೂಡ ವೈಯಕ್ತಿಕವಾಗಿ ಪರಿಹಾರ ನೀಡಿ ಆತ್ಮಸ್ಥೈರ್ಯ ತುಂಬಿರುವುದಾಗಿ ತಿಳಿಸಿದರು. ಕಳೆದ ವರ್ಷ ಹಾದನೂರು, ಒಡೆಯನಪುರ ಗ್ರಾಮದ ದನಗಾಹಿ ಒಬ್ಬರನ್ನು ಹುಲಿ ಬಲಿ ಪಡೆದುಕೊಂಡಿತ್ತು. ಒಂದು ವರ್ಷ ಕಳೆದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿದಿಲ್ಲ. ಈ ವಿಚಾರವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಸ್ಪಷ್ಟ ಮಾಹಿತಿಯನ್ನು ಕೂಡ ನಮ್ಮ ಗಮನಕ್ಕೆ ತಂದಿಲ್ಲ. ಹುಲಿಯನ್ನು ಸೆರೆ ಹಿಡಿಯಲು ಆನೆಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಕಾಡಂಚಿನ ನಿವಾಸಿಗಳಿಗೆ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸುವುದಾಗಿ ಅವರು ಹೇಳಿದರು. ಈ ಕುರಿತಂತೆ ನವೆಂಬರ್ 5 ರಂದು ಹೆಡಿಯಾಲ ಭಾಗದಲ್ಲಿ ಸಭೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಏನಿದು ಘಟನೆ ? : ನಂಜನಗೂಡು ತಾಲೂಕಿನ ಮಲ್ಕುಂಡಿ ಸಮೀಪದ ಹೆಡಿಯಾಲ ಕುದುರೆಗುಂಡಿ ಹಿನ್ನೀರು ಪ್ರದೇಶದಲ್ಲಿ ರೈತರೊಬ್ಬರು ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ಮಾಡಿ ಹಸುವನ್ನು ಕೊಂದು ಹಾಕಿತ್ತು. ಹಸುವನ್ನು ರಕ್ಷಿಸಲು ಹೋಗಿದ್ದ ರೈತ ವೀರಭದ್ರ ಭೋವಿ (71) ಅವರ ಮೇಲೂ ದಾಳಿ ನಡೆಸಿ ಗಂಭೀರ ಗಾಯಗೊಳಿಸಿತ್ತು. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಸಿಬ್ಬಂದಿಗಳ ಜೊತೆ ಗ್ರಾಮದ ಕೆಲವರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿ ಮಾತಿನ ಚಕಮಕಿ ನಡೆಸಿದ್ದಾರೆ. ಅಲ್ಲದೇ ಅರಣ್ಯ ಸಿಬ್ಬಂದಿ ಮಹಾಂತೇಶ್​ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಕಳೆದ ವರ್ಷ ಇದೇ ಹಾದನೂರು ಒಡೆಯಪುರದ ಮಹಾದೇವ ಗೌಡ ಎಂಬುವರ ಮೇಲೆ ಹುಲಿ ದಾಳಿ ಮಾಡಿ ಅವರನ್ನು ಬಲಿ ಪಡೆದಿತ್ತು. ಅಂದಿನಿಂದಲೂ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಆಗ್ರಹಿಸಿದ್ದರು. ಆದರೆ ಇಲ್ಲಿಯವರೆಗೂ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿದಿಲ್ಲ ಎಂಬುದೇ ಗ್ರಾಮಸ್ಥರ ದೂರಾಗಿದೆ.

ಪ್ರತ್ಯೇಕ ಘಟನೆ : ಮತ್ತೊಂದೆಡೆ ಸೆಪ್ಟೆಂಬರ್​ 22ರಂದು ಹುಲಿ ದಾಳಿಗೆ ದನಗಾಹಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮುದ್ದನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ನಿವಾಸಿ ರಮೇಶ (40) ಗಾಯಗೊಂಡ ವ್ಯಕ್ತಿ ಎಂಬುದು ತಿಳಿದುಬಂದಿತ್ತು.

ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ಎರಗಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿಯನ್ನು ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ರೈತನ ಮೇಲೆ ಹುಲಿ ದಾಳಿ; ಗ್ರಾಮದ ಕೆಲವರಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.