ಮೈಸೂರು : ದನಗಾಹಿಯನ್ನು ಹುಲಿಯೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲೂಕಿನ ಹಾದನೂರ ಒಡೆಯನಪುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಒಡೆಯನಪುರ ಗ್ರಾಮದ ಪುಟ್ಟಸ್ವಾಮಿ (46) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿನ ನಂಜದೇವರ ಬೆಟ್ಟದ ತಪ್ಪಲಿನ ತನ್ನ ಜಮೀನಿನಲ್ಲಿ ಮೃತ ಪುಟ್ಟಸ್ವಾಮಿ ಜಾನುವಾರುಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಜಮೀನಿನಲ್ಲಿದ್ದ ಹುಲಿ ಏಕಾಏಕಿ ದಾಳಿ ಮಾಡಿದ್ದು, ಪುಟ್ಟಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ ಒಂದು ಜಾನುವಾರನ್ನೂ ಹುಲಿ ಕೊಂದು ಹಾಕಿದೆ.
ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದಿದ್ದು, ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಓದಿ : ಅರಣ್ಯಾಧಿಕಾರಿಗಳ ದಾಳಿ : 4.5 ಲಕ್ಷ ಮೌಲ್ಯದ ಮರದ ದಿಮ್ಮಿಗಳು ವಶ, ಮೂವರ ಬಂಧನ