ಮೈಸೂರು: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು 'ಒಡೆಯರ್ ಎಕ್ಸ್ಪ್ರೆಸ್' ಎಂದು ಬದಲಾಯಿಸಲಾಗಿದೆ ಎಂದು ರೈಲ್ವೆ ಇಲಾಖೆ ಶುಕ್ರವಾರ ತಿಳಿಸಿದೆ. ಹಾಗೆಯೇ ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು 'ಕುವೆಂಪು ಎಕ್ಸ್ಪ್ರೆಸ್' ಎಂದು ಮರು ನಾಮಕರಣ ಮಾಡಲಾಗಿದೆ.
-
ಶುಕ್ರವಾರದ ಶುಭ ಸುದ್ದಿ!
— Pratap Simha (@mepratap) October 7, 2022 " class="align-text-top noRightClick twitterSection" data="
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
">ಶುಕ್ರವಾರದ ಶುಭ ಸುದ್ದಿ!
— Pratap Simha (@mepratap) October 7, 2022
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZzಶುಕ್ರವಾರದ ಶುಭ ಸುದ್ದಿ!
— Pratap Simha (@mepratap) October 7, 2022
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
ಈ ಬಗ್ಗೆ ಟ್ವಿಟ್ ಮಾಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಪ್ರಹ್ಲಾದ್ ಜೋಶಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು 'ಒಡೆಯರ್ ಎಕ್ಸ್ಪ್ರೆಸ್' ನಿಮಗೆ ಸೇವೆ ನೀಡಲಿದೆ!!. ಮೈಸೂರು-ತಾಳಗುಪ್ಪ ರೈಲು 'ಕುವೆಂಪು ಎಕ್ಸ್ಪ್ರೆಸ್' ಆಗಲಿದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಬೇಕೆಂದು ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರತಾಪ್ ಸಿಂಹ ಲಿಖಿತ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ನಮಗೆ ಅಖಂಡ ಕಾಶ್ಮೀರ ಬೇಕು.. ಪಿಒಕೆಯಲ್ಲಿ ವಾಸಿಸುವ ಜನರು ಭಾರತಕ್ಕೆ ಸೇರಲು ಬಯಸುತ್ತಾರೆ: ರಾಮದಾಸ್ ಅಠಾವಳೆ