ಮೈಸೂರು: ಇಂದು ಮೈಸೂರು ಜಿಲ್ಲೆಯಲ್ಲಿ 737 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 178 ಡಿಸ್ಚಾರ್ಜ್ ಹಾಗೂ 12 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 737 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 18,686 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 12,931 ಜನ ಗುಣಮುಖರಾಗಿದ್ದಾರೆ.
5,299 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 456 ಮಂದಿ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.