ETV Bharat / state

ದಸರಾ ಮುನ್ನೆಚ್ಚರಿಕೆ: ಮೈಸೂರಿನ ಪ್ರವಾಸಿ ತಾಣಗಳ ಭೇಟಿಗಿಲ್ಲ ಅವಕಾಶ - Dussehra

ಕೊರೊನಾ ಸೋಂಕು ಹಬ್ಬುತ್ತಿರುವ ಕಾರಣ ಮೈಸೂರು ದಸರಾ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಮುಚ್ಚಲು ಜಿಲ್ಲಾಡಳಿತ ತೀರ್ಮಾನಿಸಿದೆ.

sds
ಮೈಸೂರಿನ ಪ್ರವಾಸಿ ತಾಣಗಳು ಬಂದ್​
author img

By

Published : Oct 14, 2020, 9:11 PM IST

ಮೈಸೂರು: ಕೋವಿಡ್​ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್‍ ಸ್ವಾಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಮಾರು 900 ಮಂದಿ ಮೃತಪಟ್ಟಿದ್ದಾರೆ. ಸುಮಾರು 6,800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ. ಕಳೆದ ವರ್ಷ ದಸರಾ ಸಮಯದಲ್ಲಿ ಲಕ್ಷಾಂತರ ಜನ ಜಿಲ್ಲೆಗೆ ಭೇಟಿ ನೀಡಿದ್ದರು.

ಈ ಬಾರಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅಕ್ಟೋಬರ್ 14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ನಿರ್ಬಂಧಿಸಲಾಗಿದೆ. ಜಿಲ್ಲೆಯ ಸಮೀಪದಲ್ಲಿರುವ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.