ಮೈಸೂರು: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಟಿ.ನರಸೀಪುರ ತಾಲೂಕಿನ ಆರ್.ಪಿ. ಹುಂಡಿ ಬಳಿ ನಡೆದ ನಡೆದಿದೆ.
ಮುತ್ತತ್ತಿ ಗ್ರಾಮದ ನಿವಾಸಿ ವರ್ಷದ ಉದಯ್(25) ಮೃತಪಟ್ಟಿರುವ ಯುವಕ. ಹಿಂಬದಿ ಸವಾರ ಲೋಕೇಶ್(23) ಗಂಭೀರವಾಗಿ ಗಾಯಗೊಂಡಿದ್ದಾನೆ. ಆರ್.ಪಿ.ಹುಂಡಿ ಗ್ರಾಮದ ತಿರುವಿನಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಉದಯ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಇನ್ನು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಗಾಯಾಳುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.