ಮೈಸೂರು: ಲಾಕ್ಡೌನ್ಗೆ ಸಡಿಲಿಕೆ ಸಿಕ್ಕಿದ್ದು, ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಯಾವಾಗ ಶುರುವಾಗಲಿದೆ ಎಂದು ಹಂಬಲಿಸುತ್ತಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ.
ಮೇ 22 ರಿಂದ ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್ ಬೆಂಗಳೂರಿನಿಂದ ಬೆಳಗ್ಗೆ 9.20ಕ್ಕೆ ಹೊರಡುವ ರೈಲು, ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 12.45 ಕ್ಕೆ ತಲುಪಲಿದೆ.

ಮೈಸೂರು ರೈಲು ನಿಲ್ದಾಣದಿಂದ ಮಧ್ಯಾಹ್ನ 1.45 ಕ್ಕೆ ತೆರಳುವ ರೈಲು, ಬೆಂಗಳೂರಿಗೆ ಸಂಜೆ 5 ಗಂಟೆಗೆ ತಲುಪಲಿದೆ. ಇನ್ನು, ಮೈಸೂರಿನಿಂದ ಹೊರಡುವ ರೈಲು ನಾಗನಹಳ್ಳಿ, ಪಾಂಡವಪುರ, ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ ಮಾರ್ಗವಾಗಿ ಬೆಂಗಳೂರು ತಲುಪಲಿದೆ.
ಬೆಂಗಳೂರಿನಿಂದ ಹೊರಡುವ ರೈಲು ಕೆಂಗೇರಿ, ರಾಮನಗರ, ಮದ್ದೂರು, ಮಂಡ್ಯ, ಪಾಂಡವಪುರ, ನಾಗನಹಳ್ಳಿ ಮಾರ್ಗವಾಗಿ ಮೈಸೂರು ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.