ETV Bharat / state

ಜನ ಕಷ್ಟದಲ್ಲಿದ್ದಾರೆ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ್ ಸವದಿ

ಲಾಕ್‌ಡೌನ್‌ನಿಂದ ಸಾರಿಗೆ ಇಲಾಖೆಗೆ 4 ಸಾವಿರ ಕೋಟಿ ರೂ.ನಷ್ಟವಾಗಿದೆ. ಸಾರಿಗೆ ಸಿಬ್ಬಂದಿ ಬೇಡಿಕೆ ಇಟ್ಟಿದ್ದ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಈಗ ಸಂಬಳ ಪರಿಷ್ಕರಣೆ ಮಾಡಬೇಕೆಂದು ಕೇಳುತ್ತಿದ್ದಾರೆ. ಈ ಸಮಯದಲ್ಲಿ ಕಷ್ಟ ಸಾಧ್ಯ ಎಂದು ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ
ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ
author img

By

Published : Jul 6, 2021, 4:03 PM IST

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಜನಸಾಮಾನ್ಯರು ಕಷ್ಟದಲ್ಲಿದ್ದಾರೆ. ಹಾಗಾಗಿ, ಸದ್ಯಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ

ಇಂದು ಮೈಸೂರು ನಗರದಲ್ಲಿ ವಾಹನ ಫಿಟ್ನೆಸ್ ಸೆಂಟರ್ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಾಗಿದ್ದರೂ ಸಹ ಕೊರೊನಾದ ಕಾರಣ ಜನಸಾಮಾನ್ಯರು ಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ಬಸ್​ ದರ ಹೆಚ್ಚಳ ಸೂಕ್ತವಲ್ಲ ಎಂದರು.

ಲಾಕ್‌ಡೌನ್‌ನಿಂದ ಸಾರಿಗೆ ಇಲಾಖೆಗೆ 4 ಸಾವಿರ ಕೋಟಿ ರೂ.ನಷ್ಟವಾಗಿದೆ. ಇನ್ನು ಸಾರಿಗೆ ಸಿಬ್ಬಂದಿ ಬೇಡಿಕೆ ಇಟ್ಟಿದ್ದ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಈಗ ಸಂಬಳ ಪರಿಷ್ಕರಣೆ ಮಾಡಬೇಕೆಂದು ಕೇಳುತ್ತಿದ್ದಾರೆ. ಇದು ಈ ಸಮಯದಲ್ಲಿ ಕಷ್ಟ ಸಾಧ್ಯವಾಗಿದ್ದು, ಈಗ ಬರುವ ಆದಾಯ ಇಂಧನಕ್ಕೆ ಸಾಲುತ್ತಿಲ್ಲ. ಜನರು ಕೊರೊನಾ ಭಯದಿಂದ ಬಸ್‌ಗಳಿಗೆ ಬರುತ್ತಿಲ್ಲ. ಕೊರೊನಾ ಕಡಿಮೆಯಾದ ಮೇಲೆ ಸಾರಿಗೆ ಇಲಾಖೆಗೆ ಆದಾಯ ಬಂದ ನಂತರ ನೌಕರರ ಸಂಬಳ ಪರಿಷ್ಕರಣೆ ಮಾಡಬಹುದು ಎಂದರು.

ಇದನ್ನೂ ಓದಿ: ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.