ಮೈಸೂರು: ಸ್ಪಾ ಮತ್ತು ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ನಗರದ ಮಹಾಜನ ಲೇಔಟ್ ಅಭಿಷೇಕ್ ರಸ್ತೆಯ ಹನಿ ಬ್ಯೂಟಿ ಪಾರ್ಲರ್ ಮೇಲೆ ಪೊಲೀಸ್ ದಾಳಿ ನಡೆದಿದೆ.
ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣ ಸಂಪಾದನೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿ, 10 ಸಾವಿರ ನಗದು ಹಣ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: 14ರ ವಯಸ್ಸಿಗೇ ಅಶ್ಲೀಲ ಚಿತ್ರ ವ್ಯಸನ: ಆಟದ ನೆಪದಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ