ಮೈಸೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಮೈಲಾಂಬೂರು ಗ್ರಾಮದ ರಾಜೇಗೌಡ (55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ ರವಿ(35) ಮೃತರು. ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.
ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.