ETV Bharat / state

ಮೈಸೂರು: ಬೈಕ್​ಗೆ ಟ್ಯಾಂಕರ್​ ಡಿಕ್ಕಿ; ಸ್ನೇಹಿತರಿಬ್ಬರು ಸಾವು

Nanjanagudu road accident: ಬೈಕ್​ ಹಾಗು ಟ್ಯಾಂಕರ್​ ನಡುವೆ ಸಂಭವಿಸಿದ ಅಪಘಾತದಲ್ಲಿ ಗೆಳೆಯರಿಬ್ಬರು ಮೃತಪಟ್ಟಿದ್ದಾರೆ.

two-close-friends-died-in-road-accident-in-nanjanagudu
ಮೈಸೂರು: ಬೈಕ್​ಗೆ ಟ್ಯಾಂಕರ್​ ಡಿಕ್ಕಿ; ಸಾವಿನಲ್ಲೂ ಒಂದಾದ ಕುಚುಕು ಗೆಳೆಯರು
author img

By ETV Bharat Karnataka Team

Published : Dec 20, 2023, 4:23 PM IST

ಮೈಸೂರು: ರಸ್ತೆ ಅಪಘಾತದಲ್ಲಿ ಇಬ್ಬರು ಗೆಳೆಯರು ಮೃತಪಟ್ಟ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲೂಪುರ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ನಂಜನಗೂಡಿನ ತಗಡೂರು ಗ್ರಾಮದ ಶಿವಮಲ್ಲೆಗೌಡ ಎಂಬವರ ಮಗ ಮಹೇಶ್ (24) ಮತ್ತು ಅದೇ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತರೆಂದು ತಿಳಿದುಬಂದಿದೆ.

ಯುವಕರಿಬ್ಬರೂ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದರು. ಬೆಳಿಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಮಹೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವರುಣಾ ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಿಳಿಗೆರೆ ಪೊಲೀಸ್​ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಮಿಕರ ಮೃತದೇಹಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭದಿಂದ ಬರುತ್ತಿದ್ದ ಆರು ಮಂದಿ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.