ಮೈಸೂರು: ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಾಥಮಿಕ ಸಂಪರ್ಕದಿಂದ ಓರ್ವ ಮಹಿಳೆಗೆ ಹಾಗೂ ಮಹಾರಾಷ್ಟ್ರದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರೋಗಿ ಸಂಖ್ಯೆ 2565, 6121, 6123, 6274, 6276 ಹಾಗೂ 6633 ಆಸ್ಪತ್ರೆಯಿಂದ ಬಿಡುಗಡೆಗೊಂಡವರು.
ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣದಲ್ಲಿ ಇನ್ನು 11 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.