ಮೈಸೂರು: ನಿವೇಶನ ಹಾಗೂ ಹಳೇ ದ್ವೇಷದ ಹಿನ್ನೆಲೆ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಎಲೆ ತೋಟದ ಬಳಿ ತಡರಾತ್ರಿ ನಡೆದಿದೆ.
ಗೌರಿಶಂಕರ್ ನಗರ ನಿವಾಸಿಗಳಾದ ಕಿರಣ್ (29) ಮತ್ತು ಕಿಶನ್ (29) ಬರ್ಬರವಾಗಿ ಕೊಲೆಯಾದವರು. ಈ ಘಟನೆಯಲ್ಲಿ ಮಧು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ, ಎಸಿಪಿ ಪೂರ್ಣಚಂದ್ರ ಕೆ.ಆರ್. ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಶ್ವಾನದಳ, ಬೆರಳಚ್ಚು ತಂಡ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೃಷ್ಣ ರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.