ETV Bharat / state

ಹಣ ವಸೂಲಿಗೆ ಯತ್ನ, ಆಡಿಯೋ ವೈರಲ್.. ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು.. - ಸುಳ್ಳು ಪ್ರಕರಣ,

ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ..

Two police personnel suspended in Mysore, extort money Attempted, false case, Nazar bad police station, ಮೈಸೂರಿನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು, ಹಣ ವಸೂಲಿ ಯತ್ನ, ಸುಳ್ಳು ಪ್ರಕರಣ, ನಜರ್​​ಬಾದ್​ ಪೊಲೀಸ್​ ಠಾಣೆ,
ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
author img

By

Published : Dec 4, 2021, 9:19 AM IST

Updated : Dec 4, 2021, 1:01 PM IST

ಮೈಸೂರು : ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜರ್​ ಬಾದ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅಮಾನತು‌ಗೊಳಿಸಿ, ತನಿಖೆಗೆ ಆದೇಶಿಸಿದ್ದಾರೆ. ನಜರ್ ಬಾದ್ ಠಾಣೆಯ ಎಎಸ್ಐ ಗೋವಿಂದನಾಯಕ‌ ಹಾಗೂ ಹೆಡ್ ಕಾನ್ಸ್‌ಟೇಬಲ್ ಚನ್ನಬಸಪ್ಪರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಅಕ್ಟೋಬರ್ 17 ರಂದು ಕೆ.ಸಿ.ಬಡಾವಣೆಯ ಆರ್ಚ್ ಬಳಿ ನಡೆದಿದ್ದ ಸಣ್ಣಪುಟ್ಟ ಗಲಾಟೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದಾರೆ.

ಬಳಿಕ ಈ ಪ್ರಕರಣವನ್ನು ಇತ್ಯರ್ಥ ಪಡಿಸಲು ಹಣ ನೀಡುವಂತೆ ಪೊಲೀಸರು ಮತ್ತು ಇತರ ವ್ಯಕ್ತಿ ನಡುವೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಈ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ನಗರ ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ನಜರ್ ಬಾದ್ ಠಾಣೆಯ ಇಬ್ಬರು ಪೊಲೀಸರನ್ನು ಸೇವೆಯಿಂದ‌ ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ.

Last Updated : Dec 4, 2021, 1:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.