ಮೈಸೂರು : ನಗರದಲ್ಲಿ ಪೊಲೀಸರು ರಸ್ತೆ ಬದಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಇಬ್ಬರು ಪೊಲೀಸರನ್ನ ಅಮಾನತುಗೊಳಿಸಲಾಗಿದೆ.
ಎಎಸ್ಐ ಕುಮಾರಸ್ವಾಮಿ, ಪಿಸಿಆರ್ ವಾಹನದ ಚಾಲಕ ಮಣಿಕಂಠ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ನಗರದ ಗಾಂಧಿ ಚೌಕ್ದಲ್ಲಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿರುವುದನ್ನ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತಾ ಹಣ ವಸೂಲಿಗೆ ಇಳಿದಿದ್ದ ಇಬ್ಬರು ಪೊಲೀಸರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಓದಿ :ಸ್ನೇಹಿತನ ಮನೆಯಲ್ಲಿ ಕಳ್ಳತನ ಮಾಡಲು ಸುಪಾರಿ ಕೊಟ್ಟವನಿಗೆ ಚಳ್ಳೆ ಹಣ್ಣು ತಿನಿಸಿದ ಖದೀಮರು