ETV Bharat / state

ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್​ ಶಾ - ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಕೇಂದ್ರ ಗೃಹ ಸಚಿವ ಅಮಿತ್​ ಶಾ
ಕೇಂದ್ರ ಗೃಹ ಸಚಿವ ಅಮಿತ್​ ಶಾ
author img

By

Published : Apr 24, 2023, 12:18 PM IST

Updated : Apr 24, 2023, 1:14 PM IST

ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್​ ಶಾ

ಮೈಸೂರು: ರಾಜ್ಯದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಹಾಗೂ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ರಾಜ್ಯ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ನಿನ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸಚಿವರು, ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯವರು ಕೇಂದ್ರ ಸಚಿವರಿಗೆ ಪೂರ್ಣ ಕುಂಭ ಸ್ವಾಗತ ನೀಡಿದರು. ಮೊದಲು ಗಣಪತಿಗೆ ಪೂಜೆ ಸಲ್ಲಿಸಿದ ಶಾ, ಬಳಿಕ ಚಾಮುಂಡಿ ತಾಯಿಯ ದರ್ಶನ ಪಡೆದರು. ಈ ವೇಳೆ ಸಂಸದ ಪ್ರತಾಪ್​ ಸಿಂಹ, ಟಿಕೆಟ್​ ವಂಚಿತ ಎಸ್​ ಎ ರಾಮದಾಸ್​ ಸೇರಿದಂತೆ ಕೆಲ ನಾಯಕರೂ ಜೊತೆಗಿದ್ದರು.

ದೇವಸ್ಥಾನದ ಹೊರಗೆ ರಾಜ್ಯ ನಾಯಕರು, ಅರ್ಚಕರು, ಬೆಂಬಲಿಗರ ಜೊತೆ ಫೋಟೋ ತೆಗೆಸಿಕೊಂಡು ಅಲ್ಲಿಂದ ವಿಮಾನ ನಿಲ್ದಾಣಕ್ಕೆ ತೆರಳಿದರು. ಚಾಮರಾಜನಗರ ಭೇಟಿ ನೀಡಲಿರುವ ಅಮಿತ್​ ಶಾ ಅವರು, ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಪರ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನದ ಬಳಿಕ ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವರು. ಇದಾದ ಬಳಿಕ ಸಂಜೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಗೆ ತೆರಳಲಿದ್ದಾರೆ.

ಓದಿ: ರಾಜ್ಯಕ್ಕೆ ಮತ್ತೆ ಆಗಮಿಸಿದ ಬಿಜೆಪಿ ಚಾಣಕ್ಯ: ಇಲ್ಲಿದೆ ಅಮಿತ್ ಶಾ ಕಾರ್ಯಕ್ರಮಗಳ ಇಂದಿನ ವಿವರ..

Last Updated : Apr 24, 2023, 1:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.