ETV Bharat / state

ಪೌರಕಾರ್ಮಿಕರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ: ಕೇಂದ್ರ ಸಚಿವ ನಾರಾಯಣಸ್ವಾಮಿ - free higher education for civil servants children

ಉನ್ನತ ಶಿಕ್ಷಣದಿಂದ ಹಿಡಿದು ಐ.ಎ.ಎಸ್ ವರೆಗೆ ಪೌರ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಚಿವ ಎ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಸಚಿವ ನಾರಾಯಣಸ್ವಾಮಿ
ಸಚಿವ ನಾರಾಯಣಸ್ವಾಮಿ
author img

By

Published : Aug 7, 2022, 10:16 PM IST

ಮೈಸೂರು: ದೇಶದ ಪೌರಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವದ ಭವನದಲ್ಲಿ ಏರ್ಪಡಿಸಿದ್ದ ಆದಿ ದ್ರಾವಿಡ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಉನ್ನತ ಶಿಕ್ಷಣದಿಂದ ಹಿಡಿದು ಐ.ಎ.ಎಸ್ ವರೆಗೆ ಪೌರ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ಪೌರಕಾರ್ಮಿಕರ ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

7ನೇ ತರಗತಿ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. 10 ನೇ ತರಗತಿ ಮುಗಿಯುವ ವೇಳೆಗೆ ಮತ್ತಷ್ಟು ವಿದ್ಯಾರ್ಥಿಗಳು ಶಿಕ್ಷಣ ತೊರೆಯುತ್ತಿದ್ದಾರೆ. ದ್ವಿತೀಯ ಪಿಯುಸಿ ವೇಳೆಗೆ ಮತ್ತಷ್ಟು ವಿದ್ಯಾರ್ಥಿಗಳು ಕಡಿಮೆಯಾಗುತ್ತಿದ್ದಾರೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಹೆಚ್ಚಾಗಿ ಆಗಮಿಸುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಶಿಕ್ಷಣದ ಸವಲತ್ತುಗಳನ್ನು ಪಡೆದು ಸಮಾಜಮುಖಿ ಕಾರ್ಯಕ್ಕೆ ಮುಂದಾಗಬೇಕು ಎಂದು ಸಚಿವರು ಕರೆ ನೀಡಿದರು.

ಸಚಿವ ಎ ನಾರಾಯಣಸ್ವಾಮಿ ಅವರು ಮಾತನಾಡಿದರು

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಮಾತನಾಡಿ, ರಾಜ್ಯ ಸರ್ಕಾರ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ ಅವರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಿದೆ. ಮುಂದಿನ ದಿನಗಳಲ್ಲಿ ಇವರನ್ನು ಕಾಯಂಗೊಳಿಸುವ ಕಾರ್ಯಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಓದಿ: ಇಂದಿಗೂ ಜಾತಿ ರಹಿತ ಸಮಾಜವಾಗಿಲ್ಲ : ಸಿದ್ದರಾಮಯ್ಯ ಬೇಸರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.