ETV Bharat / state

ನಾಳೆ ಮೈಸೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಭಾರತೀಯ ಖಭೌತ ವಿಜ್ಞಾನ ಸಂಸ್ಥೆಯು(ಐಐಎ) ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನಾ- ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಿದೆ. ಈ ಕೇಂದ್ರದ ಶಂಕುಸ್ಥಾಪನೆಯನ್ನು ನಿರ್ಮಲಾ ಸೀತಾರಾಮನ್ ನೇರವೇರಿಸಲಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ
author img

By

Published : Mar 5, 2022, 6:05 PM IST

ಮೈಸೂರು : ಭಾರತೀಯ ಖಭೌತ ವಿಜ್ಞಾನ ಸಂಸ್ಥೆಯು 80 ಕೋಟಿ ವೆಚ್ಚದಲ್ಲಿ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನಾ-ತರಭೇತಿ ಕೇಂದ್ರವನ್ನು ಮೈಸೂರಿನಲ್ಲಿ ಸ್ಥಾಪಿಸಲಾಗುತ್ತಿದ್ದು, ಅದರ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರಯವ ವಿಶ್ವವಿದ್ಯಾನಿಲಯದ 23 ಎಕರೆ ಭೂಮಿಯಲ್ಲಿ 3 ಎಕರೆ ಭೂಮಿಯನ್ನು ಕಾಸ್ಮಾಸ್ ಕೇಂದ್ರದ ನಿರ್ಮಾಣಕ್ಕಾಗಿ ನೀಡಲಾಗಿದೆ. ಕೇಂದ್ರವು 2023 ಮಾರ್ಚ್ ನೊಳಗೆ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ.‌ ಇದರಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂದು ಮೈಸೂರು ವಿವಿಯ ಕುಲಪತಿಗಳಾದ ಪ್ರೊ.ಜಿ.‌ಹೇಮಂತಕುಮಾರ್ ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.